ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದಕ್ಕೆ ಆತ್ಮಹತ್ಯೆ

4 nrp 3
Published on

ಎನ್.ಆರ್.ಪುರ: ಪದವಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದಕ್ಕೆ ಬೇಸರಗೊಂಡ ವಿದ್ಯಾರ್ಥಿಯೊಬ್ಬ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ರಾವೂರು ಗ್ರಾಮದಲ್ಲಿ ಭಾನುವಾರ ನಡೆದಿದೆ.
ದಿಶಾಂತ್(23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ದಿಶಾಂತ್ ಎನ್.ಆರ್.ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಪದವಿಯಲ್ಲಿನ ಕೆಲವು ವಿಷಯಗಳಲ್ಲಿ ಅನುತ್ತೀರ್ಣನಾಗಿದ್ದ. ಪದೇ ಪದೆ ಪರೀಕ್ಷೆ ಕಟ್ಟಿದ್ದರೂ ಅನೇಕ ವಿಷಯಗಳಲ್ಲಿ ಅನುತ್ತೀರ್ಣನಾಗುತ್ತಿದ್ದ. ಇದರಿಂದ ಮನನೊಂದಿದ್ದ ಆತ ಮಾ.2ರಂದು ತೋಟದಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಇದನ್ನು ಗಮನಿಸಿದ ಕುಟುಂಬಸ್ಥರು ಆತನನ್ನು ಕೂಡಲೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೊದಲು ಶಿವಮೊಗ್ಗ ತದನಂತರ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಿದರೂ ಚಿಕಿತ್ಸೆ ಫಲಿಸದೆ ಭಾನುವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net