

ಶಿಗ್ಗಾಂವಿ: ವೈಯಕ್ತಿಕವಾಗಿ ಸಾಲ ಮಾಡಿಕೊಂಡಿದ್ದ ವ್ಯಕ್ತಿ ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗೊಟಗೋಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಶರೀಫ ಉಡಚಪ್ಪ ಬಸನಾಳ (46) ಮೃತ ವ್ಯಕ್ತಿ. ಈತ ಬ್ಯಾಂಕ್ನಲ್ಲಿ ವೈಯಕ್ತಿಕ ಸಾಲ ಮಾಡಿಕೊಂಡಿದ್ದ. ಅದನ್ನು ತೀರಿಸಲಾಗದೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.