

ಕಡಬ: ಪಂಚಾಯಿತಿ ಕುಡಿಯುವ ನೀರು ಬಿಡುವ ಸಲುವಾಗಿ ಹೋದ ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಟನೆ ಕಡಬ ಠಾಣಾ ವ್ಯಾಪ್ತಿಯ ಚಾರ್ವಾಕ ಗ್ರಾಮದಲ್ಲಿ ನಡೆದಿದೆ. ಕಡಬ ತಾಲೂಕು ಚಾರ್ವಾಕ ಗ್ರಾಮದ ಮುದ್ವಾ ನಿವಾಸಿ ಆನಂದ ಎಂ.(55) ಮೃತಪಟ್ಟವರು.
ಜ.12ರಂದು ಮುಂಜಾನೆ ಎಂದಿನಂತೆ ಪಂಚಾಯಿತಿ ನೀರು ಬಿಡಲು ಹೋಗಿ ಮರಳಿ ಮನೆಗೆ ಬಂದವರು ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಕಾಣಿಯೂರಿನ ಖಾಸಗಿ ಕ್ಲಿನಿಕ್ಗೆ ಕರೆದುಕೊಂಡು ಹೋಗಿ ದಾಖಲಿಸಿದ್ದರು. ವೈದ್ಯರು ಪರೀಸಿ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ತಿಳಿಸಿದ್ದು, ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ವೈದ್ಯರು ಪರೀಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.ಮೃತರ ಮಗ ಯಶವಂತ ಎಂಬುವರು ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.