ಸಚಿವ ಸ್ಥಾನದಿಂದ ವಜಾಗೊಳಿಸಬೇಕು

K POORNIMA SHRINIVAS
Published on

ಹಿರಿಯೂರು: ಬೆಂಗಳೂರಿನ ಯಲಹಂಕದಲ್ಲಿ ದಲಿತರ ಜಮೀನು ಕಬಳಿಕೆ ಮಾಡಿ, ಮಹಿಳೆ ಮೇಲೆ ದೌರ್ಜನ್ಯ ಮಾಡಿರುವ ಆರೋಪ ಎದುರಿಸುತ್ತಿರುವ ಸಚಿವ ಡಿ.ಸುಧಾಕರ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಒತ್ತಾಯಿಸಿದ್ದಾರೆ.

ದಲಿತರ ಹೆಸರಿನಲ್ಲಿ ರಾಜಕೀಯ ಮಾಡಿ, ಇಂದು ಅದೇ ಸಮುದಾಯದ ವಿರುದ್ಧ ಮಾತನಾಡಿರುವುದು, ಮಹಿಳೆ ಮೇಲೆ ಗೂಂಡಾಗಿರಿ ವರ್ತನೆ ತೋರಿರುವುದು ಖಂಡನೀಯ. ಸಚಿವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net