ಚಿನ್ನದ ಸರ ಕಿತ್ತು ಪರಾರಿ

crime
Published on

ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆಯ ಪ್ರಸನ್ನ ಕಾಲನಿಯ ಹನುಮಂತ ಗುಡಿ ಬಳಿ ನಡೆದುಕೊಂಡು ಹೋಗುತ್ತಿದ್ದ ಸ್ಥಳೀಯ ನಿವಾಸಿ ಜಯಲಕ್ಷ್ಮೀ ದೇಸಾಯಿ ಅವರ ಕೊರಳಲ್ಲಿದ್ದ 75 ಸಾವಿರ ರೂ. ಮೌಲ್ಯದ ಚಿನ್ನದ ಸರ ಕದ್ದು ಕಳ್ಳರು ಪರಾರಿಯಾಗಿದ್ದಾರೆ.

ಮಹಿಳೆಯ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಸರ ಕಿತ್ತು ಪರಾರಿಯಾಗಿದ್ದಾನೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net