ಮುಖ್ಯ ಪೇದೆ ಅಮಾನತು

crime
Published on

ಹುಬ್ಬಳ್ಳಿ: ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ನಗರದ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಮುಖ್ಯಪೇದೆ ಮೆಹಬೂಬ್‌ಸಾಬ್ ಖಾದರಿನವರ ಎಂಬಾತನನ್ನು ಅಮಾನತುಗೊಳಿಸಿ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಕೇಶ್ವಾಪುರ ಠಾಣಾ ವ್ಯಾಪ್ತಿಯ ತನ್ನ ಮನೆಯಲ್ಲಿ ಮುಖ್ಯಪೇದೆ ಅಪ್ರಾಪ್ತರೊಂದಿಗೆ ಅನುಚಿತವಾಗಿ ವರ್ತಿಸಿದ್ದ. ಇದು ಗೊತ್ತಾಗಿ ಸ್ಥಳೀಯರು ಆತನನ್ನು ಥಳಿಸಿದ್ದರು. ನಂತರ ಕೇಶ್ವಾಪುರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮುಖ್ಯಪೇದೆಯನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಿರುವ ಪೊಲೀಸರು, 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net