ಬಸ್‌ಗಳ ಮುಖಾಮುಖಿ ಡಿಕ್ಕಿ, ಹಲವರಿಗೆ ಗಾಯ

Ullala bus
ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿರುವುದು
Published on

ಉಳ್ಳಾಲ: ಸರ್ವೀಸ್ ಬಸ್ ಮತ್ತು ಖಾಸಗಿ ವೈದ್ಯಕೀಯ ಕಾಲೇಜಿನ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹಲವು ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕೊಣಾಜೆ ಠಾಣಾ ವ್ಯಾಪ್ತಿಯ ನಾಟೆಕಲ್ ಬಳಿ ಸೋಮವಾರ ಅಪಘಾತ ನಡೆದಿದೆ. ಪುತ್ತೂರಿನಿಂದ ಮಂಜನಾಡಿ ರಸ್ತೆಯಾಗಿ ಮಂಗಳೂರಿಗೆ ಬರುತ್ತಿದ್ದ ಪ್ರಯಾಣಿಕರಿದ್ದ ಬಸ್ ಮತ್ತು ಖಾಸಗಿ ವೈದ್ಯಕೀಯ ಕಾಲೇಜಿನ ಬಸ್‌ನ ನಡುವೆ ಪರಸ್ಪರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡು ವಾಹನಗಳ ಗಾಜು ಪುಡಿಯಾಗಿದ್ದು, ಮುಂಭಾಗಕ್ಕೆ ಹಾನಿಯಾಗಿದೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net