ಬೈಕ್‌ಗೆ ಕಾರು ಡಿಕ್ಕಿಯಾಗಿ ಮುಖ್ಯ ಶಿಕ್ಷಕ ಸಾವು

image_123650291 (2)
Published on

ಮಂಡ್ಯ ಶಾಲೆ ಮುಗಿಸಿ ಸ್ವಗ್ರಾಮದ ಕಡೆಗೆ ತೆರಳುತ್ತಿದ್ದ ಶಿಕ್ಷಕನ ಬೈಕ್‌ಗೆ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಮುಖ್ಯಶಿಕ್ಷಕ ಮೃತಪಟ್ಟಿದ್ದಾರೆ.


ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಹೋಬಳಿಯ ಎಚ್.ಭೂವನಹಳ್ಳಿ ಗ್ರಾಮದ ರಾಮಕೃಷ್ಣೇಗೌಡ(59) ಮೃತರು. ತಾಲೂನ ಇಜ್ಜಲಘಟ್ಟ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕರಾಗಿದ್ದ ರಾಮಕೃಷ್ಣೇಗೌ ಮಂಗಳವಾರ ಸಂಜೆ ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಜೋಡಿನೇರಲಕೆರೆ ಗೇಟ್ ಬಳಿ ನಾಗಮಂಗಲ ಪಟ್ಟಣದ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ನಾಗಮಂಗಲ ಪಟ್ಟಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net