ಆರೋಗ್ಯವಂತ ಮಕ್ಕಳಿಂದ ದೇಶ ಬಲಿಷ್ಠ

RASTRIYA KRUPOSION DAY (1)8888
Published on

ಚಿತ್ರದುರ್ಗ:ಆರೋಗ್ಯವಂತ ಮಕ್ಕಳಿಂದ ಬಲಿಷ್ಠ ಭಾರತದ ನಿರ್ಮಾಣ ಸಾಧ್ಯವೆಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.ಜಿಲ್ಲಾ ಡಳಿತ,ಜಿಪಂ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಶಿಕ್ಷಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಚಿತ್ರದುರ್ಗ-ಭರಮಸಾಗರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಹಾಗೂ ಪ್ರಧಾನ ಮಂತ್ರಿ ಮಾತೃವಂದನಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು,ನಾಗರಿಕರು ಆರೋಗ್ಯವಾಗಿದ್ದರೆ ಮಾತ್ರ ಆರೋಗ್ಯವಂಥ ಮತ್ತು ಸದೃಢ ದೇಶ ನಿರ್ಮಾಣ ಸಾಧ್ಯ. ಪೌಷ್ಠಿಕ ಆಹಾರ ಸೇವಿ ಸುವುದರ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಗರ್ಭಿಣಿಯರು,ಬಾಣಂತಿಯರು ಹಾಗೂ ಮಕ್ಕಳಿಗೆ ಪೌಷ್ಠಿಕ ಆಹಾರದ ಅಗತ್ಯವಿದೆ ಎಂದರು.

ಜಿಪಂ ಸಿಇಒ ಡಾ.ಕೆ.ನಂದಿನಿ ದೇವಿ ಮಾತನಾಡಿ,ಗರ್ಭಿಣಿಯರಿಗೆ ಪೌಷ್ಠಿಕಯುಕ್ತ ಆಹಾರ ತುಂಬಾ ಅಗತ್ಯವಿದೆ. ಅಂಗನವಾಡಿ,ಆಶಾ ಕಾರ್ಯಕರ್ತರು ಗರ್ಭಿಣಿಯರಿಗೆ ಪೌಷ್ಠಿಕ ಆಹಾರವನ್ನು ತಲುಪಿಸುತ್ತಿದ್ದಾರೆ. ತೀವ್ರ ಅಪೌಷ್ಠಿಕತೆಯಿಂದ ಬಳಲುವ ಮಕ್ಕಳ ಆರೋಗ್ಯ ವನ್ನು ಸುಧಾರಿಸಬೇಕಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶ ಗಿರೀಶ್ ಮಾತನಾಡಿ,ಆಹಾರದ ಬಗ್ಗೆ ಎಲ್ಲರಿಗೂ ಅರಿವಿರಬೇಕು. ಪೌಷ್ಠಿಕ ಆಹಾರ ಸೇವನೆಯಿಂದ ಮನುಷ್ಯ ಸದೃಢವಾಗುತ್ತಾನೆ ಎಂದರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಾಧಿಕಾರಿ ಡಾ.ಗಂಗಾಧರ ವರ್ಮ,ಹಿರಿಯೂರಿನ ಬಬ್ಬೂರು ಫಾರಂನ ತೋಟಗಾರಿಕೆ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಶಶಿಕಲಾ ಬಾಯಿ ಉಪನ್ಯಾಸ ನೀಡಿದರು.

ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ಮತ್ತು ಅಂಗನವಾಡಿ ಮೇಲ್ವಿಚಾರಕರು ಹಾಗೂ ಕಾರ್ಯಕರ್ತೆಯರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು. ಪೋಷಣ್ ಮಾಸಾಚರಣೆ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ,ಜಿಲ್ಲಾ ಆಯುಷ್ ಅಧಿಕಾರಿ ಡಾ.ಯು.ಗಿರೀಶ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಭಾರತಿ ಆರ್.ಬಣಕಾರ್,ಜಿಲ್ಲಾ ನಿರೂಪಾಣಾಧಿಕಾರಿ ಕೆಂಪಹನುಮಯ್ಯ,ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಸುಧಾ, ಪಿ.ಲೋಕೇಶ್ವರಪ್ಪ,ಆರ್‌ಸಿಎಚ್ ಅಧಿಕಾರಿ ಡಾ.ಕುಮಾರಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net