ಆರೋಗ್ಯ ಮಾಹಿತಿ ಮತ್ತು ವಸ್ತು ಪ್ರದರ್ಶನ

health
Published on

ಕುಶಾಲನಗರ:

ಕುಶಾಲನಗರದ ಗುಂಡೂರಾವ್ ಬಡಾವಣೆಯ ಗಣಪತಿ ಜಾತ್ರೋತ್ಸವ ಮಳಿಗೆಗಳ ಬಳಿ ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಮಾಹಿತಿ ಹಾಗೂ ಅನುಕೂಲಕ್ಕಾಗಿ ಆರೋಗ್ಯ ಮಾಹಿತಿ ಮತ್ತು ವಸ್ತು ಪ್ರದರ್ಶನ ಘಟಕವನ್ನು ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಮಧುಸೂದನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕುಶಾಲನಗರ ಜಾತ್ರೋತ್ಸವಕ್ಕೆ ಪ್ರತಿ ದಿನ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುವುದರಿಂದ ಜನರಲ್ಲಿಗೆ ಆರೋಗ್ಯ ಮಾಹಿತಿ ಕೊಂಡೊಯ್ಯುವ ಉದ್ದೇಶದಿಂದ ಇಲಾಖೆಯಿಂದ ಮಾಹಿತಿ ಕೇಂದ್ರ ತೆರೆಯಲಾಗಿದೆ. ಇದರ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದರು.

ತಾಲೂಕು ಆರೋಗ್ಯಾಧಿಕಾರಿ ಡಾ. ಇಂದೂಧರ್ ಮಾತನಾಡಿ, ಜನಸಾಮಾನ್ಯರಲ್ಲಿ ಇತ್ತೀಚಿನ ದಿನಗಳಲ್ಲಿ ಬಿಪಿ ಹಾಗೂ ಶುಗರ್ ಅವರ ಅರಿವಿಗೆ ಬಾರದಂತೆ ಜೀವಕ್ಕೆ ಹಾನಿ ಮಾಡುತ್ತಿದೆ. ಹಾಗಾಗಿ ಪ್ರತಿಯೊಬ್ಬರು ಕಾಲ ಕಾಲಕ್ಕೆ ಬಿಪಿ ಹಾಗೂ ಶುಗರ್ ಪರೀಕ್ಷಿಸಿಕೊಳ್ಳಬೇಕು. ಅಗತ್ಯ ಬಿದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆದು ಉತ್ತಮ ಆರೋಗ್ಯ ಹೊಂದಲು ಸಹಕಾರಿಯಾಗುತ್ತದೆ ಎಂದರು.

ಕೂಡಿಗೆಯ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಿಕಾ ಮೂರ್ತಿ, ಜಿಲ್ಲಾ ಆರೋಗ್ಯ ಇಲಾಖೆಯ ಶಿಕ್ಷಣ ಅಧಿಕಾರಿ ಹೆಚ್.ಕೆ.ಶಾಂತಿ, ಸಮುದಾಯ ಆರೋಗ್ಯ ಅಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net