

ಕುಶಾಲನಗರ:
ತಾಲೂಕಿನ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಹೆಬ್ಬಾಲೆ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಬುಧವಾರ ಭೇಟಿ ನೀಡಿ ಆರೋಗ್ಯದ ಬಗ್ಗೆ ಇಲಾಖೆಯ ಸೂಚನೆಯಂತೆ ಸಂಪೂರ್ಣವಾದ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ಮತ್ತು ಶಾಲಾ ಶಿಕ್ಷಕರಿಗೆ ನೀಡಿದರು.
ಮುಂಜಾಗ್ರತಾ ಕ್ರಮವಾಗಿ ಶಾಲಾ ಆವರಣದಲ್ಲಿ ಲಾರ್ವಾ ಸಮೀಕ್ಷೆ, ಹಿರಿಯ ಆರೋಗ್ಯ ನಿರೀಕ್ಷಕ ಜನಾರ್ದನ ಡೆಂಗ್ಯೂ ರೋಗದ ಬಗ್ಗೆ ಹಾಗೂ ಕೋವಿಡ್ - 19 ಕಾಯಿಲೆ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಹೆಬ್ಬಾಲೆ ಆರೋಗ್ಯ ನಿರೀಕ್ಷ ಸಂಜಯ್ ಕುಮಾರ್ ಮತ್ತು ಸಿಬ್ಬಂದಿ ಇದ್ದರು.