ಉಚಿತ ಆರೋಗ್ಯ ತಪಾಸಣಾ ಶಿಬಿರ

valmiki
Published on

ಕುಶಾಲನಗರ:

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಕೊಡಗು ಜಿಲ್ಲಾ ಘಟಕ ಮತ್ತು ಕುಶಾಲನಗರ ಅಧಿಶಕ್ತಿ ಮಲ್ಟಿಸ್ಪೆಷಾಲಿಟ್ ಕ್ಲಿನಿಕ್ ಸಂಯುಕ್ತ ಆಶ್ರಯದಲ್ಲಿ ತೊರೆನೂರು ವಿರಕ್ತ ಮಠದ ಆವರಣದಲ್ಲಿ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಮಹಾಸಭಾದ ಜಿಲ್ಲಾ ಅಧ್ಯಕ್ಷ ಹೆಚ್.ವಿ. ಶಿವಪ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತಾನಾಡಿ ಗ್ರಾಮಾಂತರ ಪ್ರದೇಶಗಳಲ್ಲಿ ಆಸ್ಪತ್ರೆಯವರ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಮಾಡಿಸುವುದರ ಮೂಲಕ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಆರೋಗ್ಯವೇ ಭಾಗ್ಯ ಎಂಬAತೆ ಮನುಷ್ಯನಿಗೆ ಪ್ರಾಥಮಿಕ ತಪಾಸಣೆ ಬಹು ಮುಖ್ಯವಾಗಿರುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ತೊರೆನೂರು ವಿರಕ್ತ ಮಠದ ಪೀಠಾಧ್ಯಕ್ಷ ಶ್ರೀ ಮಲ್ಲೇಶ್ವ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಟಿ. ಎಸ್. ಶಾಂಭಶಿವಯ್ಯ, ಶಿವಾನಂದ, ತಾಲೂಕು ಪಂಚಾಯತ ಮಾಜಿ ಉಪಾಧ್ಯಕ್ಷ ಟಿ.ಕೆ. ಪಾಂಡುರAಗ, ಪ್ರಣೇಶ್, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗ ಹಾಜರಿದ್ದರು. ಉಚಿತ ತಪಾಸಣೆಯಲ್ಲಿ ಸಕ್ಕರೆ ಕಾಯಿಲೆ ಪರೀಕ್ಷೆ, ರಕ್ತ ಒತ್ತಡ ಪರೀಕ್ಷೆ ನಡೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net