ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರದಲ್ಲಿ ಪರಿಶೀಲನೆ

health
Published on

ಕುಶಾಲನಗರ:

ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ಪುನರ್ವಸತಿ ಕೇಂದ್ರಕ್ಕೆ ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಸಂಜಯ್ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಅವರು ಸಾಂಕ್ರಾಮಿಕ ರೋಗಗಳ ಬಗ್ಗೆ ಮಾಹಿತಿ ಕಲೆ ಹಾಕಿದರು. ಕೊಳಚೆ ನೀರು ಹರಿಯುತ್ತಿರುವ ಕಾಲುವೆಯ ದುರಸ್ತಿ ಸೇರಿದಂತೆ ಶುಚಿತ್ವಕ್ಕೆ ಸಂಬAಧಿಸಿದAತೆ ಹೆಚ್ಚಿನ ಆದ್ಯತೆ ನೀಡುವಂತೆ ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಲಹೆ ಮಾಡಿ ಪರಿಶೀಲನೆಯ ವರದಿಯನ್ನು ಕೂಡಿಗೆ ಗ್ರಾಮ ಪಂಚಾಯಿತಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಲ್ಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net