

ಕೋಟ: ಕೋಟ ಗ್ರಾಪಂ ವಠಾರದಲ್ಲಿ ಉಡುಪಿ ಜಿಪಂ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾಹಿತಿ, ಶಿಕ್ಷಣ, ಸಂವಹನ ವಿಭಾಗ, ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ ಸಹಯೋಗದಲ್ಲಿ ಜಾನಪದ ಕಲಾಪ್ರಕಾರದಡಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ ‘ನಮ್ಮ ಆರೋಗ್ಯ ನಮ್ಮ ಜವಾಬ್ದಾರಿ’ ಎಂಬ ಶೀರ್ಷಿಕೆಯಡಿ ಕಿರು ಯಕ್ಷ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಕೋಟ ಗ್ರಾಪಂ ಅಧ್ಯಕ್ಷೆ ಜ್ಯೋತಿ ಬಿ.ಶೆಟ್ಟಿ ಚಾಲನೆ ನೀಡಿದರು. ಕೋಟ ಸಮುದಾಯ ಆರೋಗ್ಯ ಕೇಂದ್ರ ಹಿರಿಯ ವೈದ್ಯಾಧಿಕಾರಿ ಡಾ.ವಿಶ್ವನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ ಎಚ್.ಕುಂದರ್, ಸದಸ್ಯ ಅಶೋಕ್ ಶೆಟ್ಟಿ, ಕೋಟ ಗ್ರಾಮ ಲೆಕ್ಕಿಗ ಚಲುವರಾಜು, ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಮಾಲತಿ ಶೇಖರ್, ಪಂಚಾಯಿತಿ ಸದಸ್ಯ ಚಂದ್ರ ಪೂಜಾರಿ, ಶಿವರಾಮ ಶೆಟ್ಟಿ, ಕೋಟ ಸಮುದಾಯ ಆರೋಗ್ಯ ಕೇಂದ್ರ ಆರೋಗ್ಯ ನಿರೀಕ್ಷಣಾಧಿಕಾರಿ ಹರೀಶ್ಚಂದ್ರ, ಕೇಂದ್ರದ ಸಿಸ್ಟರ್ ನಿರ್ಮಲಾ, ವಾರಿಜಾ ಮತ್ತಿತರರು ಇದ್ದರು. ಗ್ರಾಪಂ ಕಾರ್ಯದರ್ಶಿ ಶೇಖರ ಮರವಂತೆ ಸ್ವಾಗತಿಸಿ, ಪಿಡಿಒ ಸುರೇಶ್ ಬಂಗೇರ ನಿರೂಪಿಸಿದರು.