ವಸತಿ ಶಾಲೆಯಲ್ಲಿ ಆರೋಗ್ಯ ಅರಿವು ಕಾರ್ಯಕ್ರಮ

helth camp
ವಿಜಯಪುರದ ಅಫಜಲಪುರ ಟಕ್ಕೆಯ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡ ‘ಆರೋಗ್ಯ ಅರಿವು’ ಕಾರ್ಯಕ್ರಮಕ್ಕೆ ತಾಲೂಕು ಆರೋಗ್ಯ ಅಧಿಕಾರಿ ಡಾ.ಪಿ.ಎ. ಹಿಟ್ನಳ್ಳಿ ಹಾಗೂ ಪ್ರಾಂಶುಪಾಲ ಸಿದ್ದರಾಮ ಎಂಟಯತು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು. ಎಸ್.ಎ. ಜಮಾದಾರ, ಎನ್.ಆರ್.ಬಾಗವಾನ್, ಡಾ. ಮಂಜುನಾಥ ಪೋಳ ಮತ್ತಿತರರಿದ್ದಾರೆ.
Published on

ವಿಜಯಪುರ: ಅಫಜಲಪುರ ಟಕ್ಕೆಯ ಸರ್ಕಾರಿ ಮುಸ್ಲಿಂ ವಸತಿ ಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಶನಿವಾರ ಹಮ್ಮಿಕೊಂಡ ‘ಆರೋಗ್ಯ ಅರಿವು’ ಕಾರ್ಯಕ್ರಮಕ್ಕೆ ತಾಲೂಕಾ ಆರೋಗ್ಯ ಅಧಿಕಾರಿ ಡಾ.ಪಿ.ಎ. ಹಿಟ್ನಳ್ಳಿ ಹಾಗೂ ಪ್ರಾಂಶುಪಾಲ ಸಿದ್ದರಾಮ ಎಂಟಯತು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು.

ಬಳಿಕ ಕ್ಷಯರೋಗದ ಕುರಿತು ಮಾಹಿತಿ ನೀಡಿದ ಡಾ.ಪಿ.ಎ.ಹಿಟ್ನಳ್ಳಿ, ಕ್ಷಯರೋಗ ಮೈಕ್ರೋ ಬ್ಯಾಕ್ಟಿರಿಯಾದಿಂದ ಹರಡುವ ಒಂದು ಸಾಂಕ್ರಾಮಿಕ ರೋಗವಾಗಿದೆ. ಕ್ಷಯ ರೋಗ ಸಾಮಾನ್ಯ ಲಕ್ಷಣಗಳೆಂದರೆ ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕೆಲವು ವೇಳೆ ಕಫದ ಜೊತೆಗೆ ರಕ್ತ ಕಾಣಿಸುವುದು. ಜ್ವರ, ವಿಶೇಷವಾಗಿ ರಾತ್ರಿ ವೇಳೆ ಜ್ವರ ಬರುವುದು ಕಡಿಮೆಯಾಗುವುದು. ರಾತ್ರಿ ವೇಳೆ ಬೆವರುವುದು, ಹಸಿವಾಗದಿರುವುದು ಇದರ ಲಕ್ಷಣಗಳಾಗಿವೆ. ಸೂಕ್ತ ಚಿಕಿತ್ಸೆಯ ಮೂಲಕ ಕ್ಷಯರೋಗ ಗುಣಪಡಿಸಬಹುದಾಗಿದೆ ಎಂದು ಹೇಳಿದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಆರ್.ಬಾಗವಾನ್ ಮಾತನಾಡಿ, ಹದಿಹರೆಯದವರಲ್ಲಿ ಸಾಮಾನ್ಯವಾಗಿ ಕಂಡು ಬರುವಂತಹ ಆರೋಗ್ಯ ಸಮಸ್ಯೆಗಳು ಪೌಷ್ಠಿಕಾಂಶದ ಕೊರತೆಯಿಂದ ಬರುವ ರೋಗಗಳು, ಮಾನಸಿಕ ಆರೋಗ್ಯ ಸಮಸ್ಯೆಗಳು, ಅಸಾಂಕ್ರಾಮಿಕ ರೋಗಗಳ ಹಾಗೂ ರೋಗಗಳ ಪರಿಹಾರ ಕುರಿತು ವಿವರಿಸಿದರು.

ತಾಲೂಕು ವಿಸ್ತರಣಾಧಿಕಾರಿ ಎಸ್.ಎ. ಜಮಾದಾರ ಮಾತನಾಡಿ, ಪರಿಸರ ನೈರ್ಮಲ್ಯ, ಶುದ್ಧ ಕುಡಿಯುವ ನೀರು, ಕ್ರಿಮಿನಾಶಕ ಸಿಂಪರಣೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ-ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಆರ್‌ಬಿಎಸ್‌ಕೆ ತಂಡದ ವೈದ್ಯಾಧಿಕಾರಿ ಡಾ. ಮಂಜುನಾಥ ಪೋಳ, ಡಾ. ಮಲ್ಲಿಕಾರ್ಜುನ ಗಂಗನಹಳ್ಳಿ, ಡಾ. ಸೋನಾಲಿ ಸೋನಾವಣೆ, ಡಾ. ಅಮೃತಾ ಗೊಟ್ಯಾಳ, ಡಾ. ಈರಣ್ಣ ತುಪ್ಪದ, ಡಾ. ಜಯಶ್ರೀ ನಾಯಕ, ರಮೇಶ ಅರಕೇರಿ, ರಾಜು ಬೋರಗಿ, ಮುತ್ತು ಬಿರಾದಾರ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net