ಯೋಗಾಭ್ಯಾಸದಿಂದ ಆರೋಗ್ಯ ವೃದ್ಧಿ

IMG_20231201_155528
Published on

ಬಾಗೂರು : ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಬಾಗೂರು ಲಯನ್ಸ್ ಕ್ಲಬ್ ಅಧ್ಯಕ್ಷ ಬಿ. ಎಚ್. ಶಿವಣ್ಣ ಹೇಳಿದರು. ಜೋಯಿಸರಹಳ್ಳಿ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲಯನ್ಸ್ ಕ್ಲಬ್, ಚೈತನ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸಂಯುಕ್ತವಾಗಿ ಶುಕ್ರವಾರ ಆಯೋಜಿಸಿದ್ದ ಸಮುದಾಯ ಆಧಾರಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ನಕಲಿ, ಕಲಬೆರಕೆ ಮತ್ತು ಅಗ್ಗದ ಬೆಲೆಯ ಎಣ್ಣೆಗಳನ್ನು ಹೆಚ್ಚು ಬಳಸುವುದರಿಂದ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತವೆ. ಹಾಗಾಗಿ ಗಾಣದಿಂದ ತೆಗೆದ ಎಣ್ಣೆಯನ್ನೇ ಬಳಸುವುದು ಸೂಕ್ತ. ಇದರೊಂದಿಗೆ ಸಾವಯವ ಆಹಾರ ಸೇವನೆ ಬಹು ಉತ್ತಮ ಎಂದು ಅವರು ಸಲಹೆ ನೀಡಿದರು.
ಲಯನ್ಸ್ ಕ್ಲಬ್ ಕಾರ್ಯದರ್ಶಿ ಬಸವರಾಜ, ಗ್ರಾಮ ಪಂಚಾಯತಿ ಸದಸ್ಯ ಹೊನ್ನೇನಹಳ್ಳಿ ಸ್ವಾಮಿ ಗೌಡ, ಆರೋಗ್ಯ ಇಲಾಖೆ ನೌಕರರು ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net