ಗ್ರಾಮಮಟ್ಟದ ಸೇವೆ ಪ್ರಯೋಜನಕಾರಿ - ಶ್ರೀ ಮಹಾಬಲೇಶ್ವರ ಸ್ವಾಮೀಜಿ ಆಶೀರ್ವಚನ - 3೦೦ ಮಂದಿಯ ಆರೋಗ್ಯ ತಪಾಸಣೆ

PTR_21 SEP_4
Published on


ವಿಟ್ಲ: ಸಮಾಜದಲ್ಲಿ ಜನರಿಗೆ ಆರೋಗ್ಯದ ಬಗ್ಗೆ ಅರಿವು ಪ್ರಸ್ತುತ ಸನ್ನಿವೇಶದಲ್ಲಿ ಅತ್ಯಂತ ಅವಶ್ಯಕವಾಗಿದೆ. ಉಚಿತ ಆರೋಗ್ಯ ಮಾಹಿತಿಗಳು ಗ್ರಾಮಮಟ್ಟದಲ್ಲಿ ನಡೆಯುವುದು ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದು ಕಣಿಯೂರು ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿ ಹೇಳಿದರು.

ಕನ್ಯಾನ ಶ್ರೀ ಗುರುದೇವ ಕಲ್ಯಾಣ ಮಂಟಪ ಕನ್ಯಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ದೇರಳಕಟ್ಟೆ ಯೇನೆಪೋಯ ಮೆಡಿಕಲ್ ಕಾಲೇಜು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೇಪು ವಲಯ, ಶ್ರೀ ಚಾಮುಂಡೇಶ್ವರಿ ದೇವಿ ಸೇವಾ ಟ್ರಸ್ಟ್ ಕಣಿಯೂರು, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ನಡೆದ ಆರೋಗ್ಯ ತಪಾಸಣಾ ಉಚಿತ ಶಿಬಿರ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಶ್ರೀ ಚಾಮುಂಡೇಶ್ವರಿ ದೇವಿ ಸೇವಾ ಟ್ರಸ್ಟ್‌ನ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ಇಂತಹ ಹಲವು ಸಮಾಜಮುಖಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಇದರ ಪ್ರಯೋಜನ ನಾವೆಲ್ಲರೂ ಪಡೆಯೋಣ ಎಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುತ್ತೂರು ಜಿಲ್ಲಾ ನಿರ್ದೇಶಕ ಪ್ರವೀಣ್ ಕುಮಾರ್ ಮಾತನಾಡಿದರು.
ಶಿಬಿರದಲ್ಲಿ ೩೦೦ ಸದಸ್ಯರು ಭಾಗವಹಿಸಿ ಶಿಬಿರದ ಸದುಪಯೋಗ ಪಡೆದು ಕೊಂಡರು. ಯೇನೆಪೋಯ ಆಸ್ಪತ್ರೆಯ ವೈದ್ಯರಾದ ಡಾ.ಸ್ನೇಹ ಶೆಟ್ಟಿ, ದೇಲಂತಬೆಟ್ಟು ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮನೋಜ್ ಕುಮಾರ್, ಕನ್ಯಾನ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರಘುರಾಮ ಶೆಟ್ಟಿ, ಕೇಪು ವಲಯದ ಮಾಜಿ ವಲಯಾಧ್ಯಕ್ಷ ಜಯಾನಂದ ಕಣಿಯೂರು, ಒಕ್ಕೂಟದ ಅಧ್ಯಕ್ಷರಾದ ಪೂವಪ್ಪ ಗೌಡ ಶಿರಂಕಲ್ಲು, ಕೃಷ್ಣ ನಾಯ್ಕ್, ದರ್ಣಮ್ಮ, ಸುಜಾತ ಉಪಸ್ಥಿತರಿದ್ದರು.
ಕೇಪು ವಲಯ ಮೇಲ್ವಿಚಾರಕ ಜಗದೀಶ್ ಸ್ವಾಗತಿಸಿದರು. ಜ್ಞಾನದೀಪ ಶಿಕ್ಷಕಿ ರೇಣುಕಾ ಕಣಿಯೂರು ವಂದಿಸಿದರು. ಜ್ಞಾನವಿಕಾಸ ಸಮನ್ವಯಽಕಾರಿ ವಿಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.


ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಇಂತಹ ಹತ್ತು ಹಲವು ಸಾಮಾಜಿಕ ಚಟುವಟಿಕೆಗಳು ನಡೆಯುತ್ತಿವೆ.ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಬಡ ಜನರ ಏಳಿಗೆಗೆ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ.
| ಪ್ರವೀಣ್ ಕುಮಾರ್, ಧ. ಗ್ರಾ. ಯೋ. ಪುತ್ತೂರು ಜಿಲ್ಲಾ ನಿರ್ದೇಶಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net