ಕುಶಾಲನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Health camp
Published on

ಕುಶಾಲನಗರ:

ಆದಿಚುಂಚನಗಿರಿ ಆಸ್ಪತ್ರೆ ಮತ್ತು ಕುಶಾಲನಗರ ತಾಲೂಕು ಒಕ್ಕಲಿಗರ ಸಂಘದ ಆಶ್ರಯದಲ್ಲಿ ಮಂಗಳವಾರ ಇಲ್ಲಿನ ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ನಡೆಯಿತು. ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಎಸ್.ಎಂ. ಚಂಗಪ್ಪ ಮತ್ತು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎಂ.ಕೆ. ದಿನೇಶ್ ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಈ ವೇಳೆ ಮಾತನಾಡಿದ ಎಂ.ಕೆ. ದಿನೇಶ್ ಪ್ರಥಮವಾಗಿ ನಮ್ಮ ತಾಲೂಕು ಸಂಘದಿAದ ಆದಿಚುಂಚನಗಿರಿ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ ಆಯೋಜಿಸಿದ್ದು ಮಧ್ಯಾಹ್ನ ತನಕ 400 ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದಾರೆ. ಹಲವರು ರಕ್ತದಾನವನ್ನೂ ಮಾಡಿದ್ದಾರೆ. ಅಂದಾಜು ಸಾವಿರ ಜನರು ತಪಾಸಣೆ ಮಾಡಿಸುವ ನಿರೀಕ್ಷೆ ಇದೆ ಎಂದರು.

ಆದಿಚುಂಚನಗಿರಿ ಆಸ್ಪತ್ರೆಯಿಂದ 40 ವೈದ್ಯರು ಮತ್ತು 30 ಸಿಬ್ಬಂದಿ ಶಿಬಿರದಲ್ಲಿ ಸೇವೆ ಸಲ್ಲಿಸಿದ್ದಾರೆ. ಹೃದ್ರೋಗ, ನರರೋಗ, ಮೂತ್ರಪಿಂಡ, ಮಧುಮೇಹ, ಪಿತ್ತ ಜನಕಾಂಗ, ಕ್ಯಾನ್ಸರ್ ಸೇರಿದಂತೆ ವಿವಿಧ ವೈದ್ಯಕೀಯ ತಜ್ಞರು, ಶಸ್ತ್ರಚಿಕಿತ್ಸೆ ತಜ್ಞರು, ಗರ್ಭಿಣಿ ಮತ್ತು ಸ್ತ್ರೀ ರೋಗ ತಜ್ಞರು, ಕೀಲು ಮೂಳೆ ತಜ್ಞರು, ದಂತ ವೈದ್ಯರು ಶಿಬಿರದಲ್ಲಿ ಪಾಲ್ಗೊಂಡಿದ್ದರು. ಇನ್ನೂ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ರೋಗಿಗಳನ್ನು ಆಸ್ಪತ್ರೆಯ ವಾಹನದಲ್ಲಿ ಕರೆದುಕೊಂಡು ಹೋಗಿ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ.

ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟನೆ ವೇಳೆ ತಾಲೂಕು ಒಕ್ಕಲಿಗರ ಸಂಘದ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಸಂಘದ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net