ಜೀವ ಉಳಿವಿಗೆ ರಕ್ತದಾನ ಮಾಡಿ

health camp
Published on

ವಿಜಯವಾಣಿ ಸುದ್ದಿಜಾಲ ದೊಡ್ಡಬಳ್ಳಾಪುರ
ರಕ್ತದಾನದಿಂದ ಬೇರೊಬ್ಬರ ಜೀವ ಉಳಿಸಬಹುದಾಗಿದೆ. ಹಾಗೆಯೇ, ರಕ್ತದಾನ ಮಾಡಿದ ಕೆಲ ಗಂಟೆಯಲ್ಲಿಯೇ ಹೊಸ ರಕ್ತ ಉತ್ಪತ್ತಿಯಾಗುತ್ತವೆ. ಆದ್ದರಿಂದ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಲಯನ್ಸ್ ಜಿಲ್ಲಾ ರಕ್ತದಾನ ಸಂಯೋಜಕ ಜಿ.ವೆಂಕಟೇಶ್ ಹೇಳಿದರು.
ನಗರದ ಶ್ರೀ ದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯೂತ್ ರೆಡ್‌ಕ್ರಾಸ್, ರೆಡ್‌ರಿಬ್ಬನ್ ಕ್ಲಬ್ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಆಫ್ ಆರ್.ಎಲ್.ಜಾಲಪ್ಪ ಇನ್‌ಸ್ಟಿಟ್ಯೂಷನ್, ಆರ್.ಎಲ್.ಜಾಲಪ್ಪ ಪಾಲಿಟೆಕ್ನಿಕ್ ಕಾಲೇಜು, ಕೋಲಾರದ ಆರ್.ಎಲ್.ಜಾಲಪ್ಪ ಆಸ್ಪತ್ರೆ ರಕ್ತನಿಧಿಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.
ಜೀವ ರಕ್ಷಕವಾದ ರಕ್ತದ ಕೃತಕ ಸೃಷ್ಟಿ ಸಾಧ್ಯವಿಲ್ಲ. ದೇಹದ ರಕ್ತವನ್ನು ದಾನ ಮಾಡುವ ಮೂಲಕ ಮತ್ತೊಬ್ಬರಿಗೆ ಬದುಕನ್ನು ಕೊಡಬಹುದು. 18 ವರ್ಷ ಮೀರಿದ ಆರೋಗ್ಯವಂತರೆಲ್ಲರೂ ರಕ್ತದಾನ ಮಾಡಬಹುದು ಎಂದರು.
ದೇವರಾಜ ಅರಸ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಜೆ.ರಾಜೇಂದ್ರ ಮಾತನಾಡಿ, ಅನಿವಾರ್ಯ ಸಂದರ್ಭಗಳಲ್ಲಿ ಜನರ ಪ್ರಾಣ ರಕ್ಷಣೆಗೆ ಮತ್ತು ಶಸಚಿಕಿತ್ಸೆಗೆ ನಾವು ಕೊಡುವ ರಕ್ತ ಮಹತ್ವವಾಗಿದೆ ಎಂದರು.
ಶಿಬಿರದಲ್ಲಿ ್ಟ 113 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ರಕ್ತದಾನಿಗಳಿಗೆ ಪ್ರಮಾಣಪತ್ರ, ಹಣ್ಣು ವಿತರಣೆ ಮಾಡಲಾಯಿತು.
ವಿದ್ಯಾಲಯದ ಪ್ರೊ.ಕೆ.ಆರ್.ರವಿಕಿರಣ್, ಕಾರ್ಯದರ್ಶಿ ಮುಕೇಶ್, ಖಜಾಂಚಿ ಎಸ್.ರವಿಕುಮಾರ್, ಆರ್‌ಎಲ್‌ಜೆಪಿ ಪ್ರಾಂಶುಪಾಲ ಪ್ರೊ.ನರಸಿಂಹರೆಡ್ಡಿ, ಸಂಜೆ ಕಾಲೇಜು ಪ್ರಾಂಶುಪಾಲ ಡಾ.ಚಿಕ್ಕಣ್ಣ, ಆಡಳಿತಾಧಿಕಾರಿ ಐ.ಎಂ.ರಮೇಶ್‌ಕುಮಾರ್, ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಕೆ.ಸಿ.ಲಕ್ಷ್ಮೀಶ, ರಕ್ತದಾನ ಶಿಬಿರ ಉಸ್ತುವಾರಿ ಕೆ.ದಕ್ಷಿಣಾಮೂರ್ತಿ, ಜೆ.ಆರ್.ರಾಕೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net