

ಕೊಳ್ಳೇಗಾಲ: ಪಟ್ಟಣದ ರೋಟರಿ ಕ್ಲಬ್ ಸಭಾಂಗಣದಲ್ಲಿ ಇತ್ತೀಚೆಗೆ ರೋಟರಿ ಕ್ಲಬ್, ಬೃಂದಾವನ ಆಸ್ಪತ್ರೆ, ಮೈಸೂರಿನ ಅಗರವಾಲ್ ಆಸ್ಪತ್ರೆ ಇವರುಗಳ ಸಹಯೋಗದಲ್ಲಿ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಶಿಬಿರಕ್ಕೆ ಚಾಲನೆ ನೀಡಿದ ರೋಟರಿ ಕ್ಲಬ್ ಅಧ್ಯಕ್ಷ ಎಸ್. ನಂದೀಶ್ ಮಾತನಾಡಿ, ರೋಟರಿ ಕ್ಲಬ್ ನಿರಂತರವಾಗಿ ಬಡ ಜನರಿಗೆ ಆರೋಗ್ಯ ಸೇವೆ ನೀಡುತ್ತಿದೆ. ಮಕ್ಕಳ ಶಿಕ್ಷಣಕ್ಕೂ ಒತ್ತೇಜಿಸುತ್ತಿದೆ. ಸಾರ್ವಜನಿಕರು ಇದರ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಶಿಬಿರದಲ್ಲಿ ಒಟ್ಟು 195 ರೋಗಿಗಳನ್ನು ತಪಾಸಣೆಗೆ ಒಳಪಡಿಸಲಾಯಿತು. ಕಣ್ಣಿನ ತಪಾಸಣೆ, ಮೂಳೆ ಸಾಂದ್ರತಾ ಪರೀಕ್ಷೆ, ಕಿವಿ, ಮೂಗು, ಗಂಟಲು ಸೇರಿದಂತೆ ಸಾಮಾನ್ಯ ಪರೀಕ್ಷೆ ನಡೆಸಲಾಯಿತು. ಅಂತೆಯೇ ರೋಗಿಗಳಿಗೆ ಉಚಿತ ಔಷಧಗಳನ್ನು ವಿತರಿಸಲಾಯಿತು.