ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳಿ: ಜಿಲ್ಲಾ ನಿರ್ದೇಶಕಿ ಎಂ.ಚೇತನಾ ಕಿವಿಮಾತು

1 (2)
Published on

ಮಂಡ್ಯ: ಪ್ರತಿಯೊಬ್ಬರೂ ಉತ್ತಮ ಆಹಾರ ಪದ್ಧತಿ ರೂಢಿಸಿಕೊಳ್ಳುವುದರ ಜತೆಗೆ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಎಂ.ಚೇತನಾ ಸಲಹೆ ನೀಡಿದರು.

ತಾಲೂಕಿನ ಬಸರಾಳು ಗ್ರಾಮದ ಉಜ್ವಲ ಮತ್ತು ಕಿರಣ ಜ್ಞಾನ ವಿಕಾಸ ಕೇಂದ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಸ್ಪಂದನಾ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಯೋಗದಲ್ಲಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಹೇಮಾವತಿ ವಿ.ಹೆಗ್ಡೆ ಅವರ ಆಶಯದಂತೆ ಆರೋಗ್ಯ ತಪಾಸಣೆಯನ್ನು ನಡೆಸಲಾಗುತ್ತಿದೆ. ಇದರ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು. ಕುಟುಂಬದಲ್ಲಿ ತಾಯಿ ಆರೋಗ್ಯವಾಗಿದ್ದರೆ ಆ ಮನೆಯ ಎಲ್ಲ ಸದಸ್ಯರು ಆರೋಗ್ಯವಾಗಿರುತ್ತಾರೆ. ಅಂತೆಯೇ ತಮ್ಮ ದಿನನಿತ್ಯದ ಬದುಕಿನಲ್ಲಿ ಆಹಾರ ಪದ್ಧತಿಗಳನ್ನು ಉತ್ತಮ ರೀತಿಯಲ್ಲಿ ಇಟ್ಟುಕೊಳ್ಳುವುದು ಜತೆಗೆ ಸಿರಿಧಾನ್ಯಗಳ ಉತ್ಪನ್ನಗಳನ್ನು ಸೇವಿಸಬೇಕು. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಯೋಜನೆ ವತಿಯಿಂದ ಆರೋಗ್ಯ ರಕ್ಷಾ ಮತ್ತು ಸಂಪೂರ್ಣ ಸುರಕ್ಷಾ ನೋಂದಣೆ ಮಾಡಿದ್ದು, ಕಾಯಿಲೆ ಬಂದಾಗ ಅದರ ಬಳಕೆಯನ್ನು ಸಹ ಮಾಡಿಕೊಳ್ಳುವುದು ಎಂದರು.

ಸ್ಪಂದನ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಆದಿತ್ಯಗೌಡ ಮತ್ತು ಕಾಲಭೈರವೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಶಂಕರೇಗೌಡ ಮಾತನಾಡಿದರು. ಗ್ರಾಮ ಪಂಚಾಯಿತಿ ಸದಸ್ಯೆ ಗೀತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಜನಾಧಿಕಾರಿ ಮಮತಾಶೆಟ್ಟಿ, ಶ್ರೀನಿವಾಸ್, ಎಚ್.ವಿ.ಶ್ವೇತಾ, ಶರತ್‌ಚಂದ್ರ, ಗಿರೀಶ್, ರೂಪಾ, ನಾಗಸುಂದರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net