ಹುಬ್ಬಳ್ಳಿಯಲ್ಲಿ ಬೃಹತ್ ಆರೋಗ್ಯ ತಪಾಸಣೆ ಶಿಬಿರ

IMG_20250123_113400_704-1.jpg
Published on

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಆಟೋಮೊಬೈಲ್ ಡೀಲರ್ಸ್ ಸಂಘ, ರೋಟರಿ ಕ್ಲಬ್, ಗುಜರಾತಿ ಸಮಾಜ, ಗುಜರಾತಿ ಮಹಿಳಾ ಮಂಡಳ, ಆಶಾ ಡಯಾಬಿಟಿಕ್ ಟ್ರಸ್ಟ್ ಆ್ಯಂಡ್ ರಿಸರ್ಚ್ ಫೌಂಡೇಷನ್, ಕೆಎಲ್ಇ ಹುಬ್ಬಳ್ಳಿ ಕೋ ಅಪರೇಟಿವ್ ಹಾಸ್ಪಿಟಲ್ ಸಹಯೋಗದಲ್ಲಿ ಇಲ್ಲಿನ ದೇಶಪಾಂಡೆ ನಗರದ ಗುಜರಾತ್ ಭವನದಲ್ಲಿ ಜ. 25ರಂದು ಬೆಳಗ್ಗೆ 9.30ಕ್ಕೆ ಆರೋಗ್ಯ ತಪಾಸಣೆ ಬೃಹತ್ ಉಚಿತ ಶಿಬಿರ ಏರ್ಪಡಿಸಲಾಗಿದೆ ಎಂದು ಕೋ ಅಪರೇಟಿವ್ ಹಾಸ್ಪಿಟಲ್ ಆಡಳಿತಾಧಿಕಾರಿ ಡಾ. ವೈ.ಎಫ್. ಹಂಜಿ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಬಿರದಲ್ಲಿ ಸುಮಾರು 25ಕ್ಕೂ ಹೆಚ್ಚು ತಜ್ಞ ವೈದ್ಯರು ಪಾಲ್ಗೊಂಡು ತಪಾಸಣೆ ನಡೆಸುವರು. ರಕ್ತದೊತ್ತಡ, ರಕ್ತ ಪರೀಕ್ಷೆ, ಹೃದಯ ರಕ್ತನಾಳದ ತಪಾಸಣೆ, ನೇತ್ರ, ದಂತ, ಚರ್ಮರೋಗ, ಕಿವಿ. ಮೂಗು, ಗಂಟಲು, ಮಾನಸಿಕ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದರು.

ಕನಿಷ್ಠ ಒಂದು ಸಾವಿರ ಜನರು ಶಿಬಿರದ ಪ್ರಯೋಜನ ಪಡೆಯುವ ನಿರೀಕ್ಷೆ ಇದೆ. ಇದೇ ಸಂದರ್ಭದಲ್ಲಿ ರಾಷ್ಟ್ರೋತ್ಥಾನ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಹೆಚ್ಚಿನ ಚಿಕಿತ್ಸೆಗೆ ಆಯ್ಕೆಯಾಗುವ ಬಿಪಿಎಲ್ ಕುಟುಂಬದ ರೋಗಿಗಳಿಗೆ ಉಚಿತವಾಗಿ ಹೆಚ್ಚಿನ ಚಿಕಿತ್ಸೆ ನೀಡಲಾಗುವುದು ಎಂದರು.

ರಾಜೇಶ ಪಟೇಲ್, ರಾಕೇಶ ಕೊಡಚವಾಡ, ಬಾಪು ಬಿರಾದಾರ, ಸುನೀಲ ಲದ್ದಡ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net