

ವಿಜಯವಾಣಿ ಸುದ್ದಿಜಾಲ ಗದಗ
ಜೀವನದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಅತೀ ಅವಶ್ಯವಾಗಿದೆ. ನಮ್ಮ ಆಹಾರ ಪದ್ದತಿಯನ್ನು ಬದಲಾವಣೆ ಮಾಡಿಕೊಳ್ಳುವುದು ಅತೀ ಮುಖ್ಯವಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.
ನಗರದ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಗುರುವಾರ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಕೆಎಲ್ಇ, ಮುನವಳ್ಳಿ ೌಂಡೇಶನ ಸಹಯೋಗದಲ್ಲಿ ಡಾ.ಮಹೇಶ ನಾಲವಾಡ ೌಂಡೇಶನ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಹಿಂದಿನ ಕಾಲದ ಆಹಾರ ಪದ್ದತಿ ಹಾಗೂ ಇಂದಿನ ಕಾಲದ ಆಹಾರ ಪದ್ದತಿಯು ಬಹಳಷ್ಟು ಬದಲಾವಣೆಗಳು ಆಗಿವೆ. ಇದರಿಂದ ಸಾಕಷ್ಟು ತೊಂದರೆಯನ್ನು ಎದುರಿಸುವಂತಹ ಪರಸ್ಥಿತಿ ಸಮಾಜದಲ್ಲಿ ನಿರ್ಮಾಣವಾಗಿದೆ. ಆಹಾರದಲ್ಲಿ ಔಷಧಿ ಬಳಕೆಯಿಂದ ಸಾಕಷ್ಟು ರೋಗಗಳಿಗೆ ತುತ್ತಾಗುವಂತಹ ಪರಸ್ಥಿತಿ ಬಂದೊದಗಿದೆ. ಈ ನಿಟ್ಟಿನಲ್ಲಿ ನಾವು ನಮ್ಮ ಆಹಾರ ಪದ್ದತಿಯನ್ನು ತುರ್ತಅಗಿ ಬದಲಾವಣೆ ಮಾಡಿಕೊಳ್ಳಬೇಕು ಎಂದರು.
ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯವರು ಹಮ್ಮಿಕೊಂಡಿರುವ ಉಚಿತ ಆರೋಗ್ಯ ಶಿಬಿರದಿಂದ ಸಾಕಷ್ಟು ವ್ಯಾಪಾರಸ್ಥರಿಗೆ, ಕೈಗಾರಿಕೋದ್ಯಮಿಗಳಿಗೆ, ಕಾಮಿರ್ಕರಿಗೆ ಅನುಕೂಲವಾಗುತ್ತದೆ. ನಾವು ಖಾಸಗಿ ಆಸ್ಪತ್ರೆಗೆ ಹೋದರೆ ಸಾಕಷ್ಟು ರ್ಖಚಾಗುತ್ತಿದ್ದು, ಇಂತಹ ಉಚಿತ ಆರೋಗ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವುದು ಸೂಕ್ತ ಎಂದರು.
ಡಾ. ಮಹೇಶ ನಾಲವಾಡ ಮಾತನಾಡಿ, ಆಧುನಿಕ ಯುಕದಲ್ಲಿ ಆಹಾರ ಪದ್ಧತಿ ಜತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಸೂಕ್ತ. ಆರೋಗ್ಯ ಸರಿದ್ದರೆ ಎಲ್ಲವನ್ನು ಸಾಧಿಸಬಹುದು. ನಮ್ಮ ಆರೋಗ್ಯ ಪದ್ಧತಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ಪ್ರತಿಯೊಬ್ಬರು ವ್ಯಾಪಾರಸ್ಥರು ಮತ್ತು ಕೈಗಾರಿಕೋದ್ಯಮಿಗಳು ವ್ಯಾಪಾರೋದ್ಯಮದ ಜೊತೆಗೆ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ಕಾಯಿಲೆಗಳು ಸಣ್ಣ ಪ್ರಮಾಣದಲ್ಲಿ ಇದ್ದಾಗ ಅದನ್ನು ವೈದ್ಯೋಪಚಾರ ಪಡೆದುಕೊಳ್ಳುವುದರಿಂದ ಕಾಯಿಲೆಗಳು ಬೆಳೆಯದಂತೆ ಮಾಡಲು ಸಾಧ್ಯವಾಗುತ್ತದೆ. ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯ ಈಶ್ವರಪ್ಪ ಮುನವಳ್ಳಿ ಮಾತನಾಡಿ, ನಮ್ಮ ಸಂಸ್ಥೆಯ ಸಹಯೋಗದಲ್ಲಿ ಈ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಅದರ ಸದುಪಯೋಗವನ್ನು ತಾವು ಎಲ್ಲರೂ ಪಡೆದುಕೊಂಡು ಆರೋಗ್ಯವಂತರಾಗಿ ಇರಬೇಕೆಂದು ತಿಳಿಸಿದರು.
ಸಂಸ್ಥೆಯ ಮಾಜಿ ಅಧ್ಯ ಚಂದ್ರು ಬಾಳಿಹಳ್ಳಿಮಠ ಮಾತನಾಡಿದರು. ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಭಾರತೀಯ ವೈದ್ಯಕಿಯ ಓಲಂಪಿಕ್ ಕ್ರೀಡಾಕೂಟದಲ್ಲಿ 4 ಬಂಗಾದ ಪದಕಗಳನ್ನು ಪಡೆದುಕೊಂಡ ಡಾ.ಜಿ.ಬಿ. ಬಿಡನಾಳ ಅವರನ್ನು ಸಂಸ್ಥೆಯಿಂದ ಸನ್ಮಾನಿಸಲಾಯಿತು. ಈ ಶಿಬಿರದಲ್ಲಿ ಸುಮಾರು 400ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಈ ಶಿಬಿರದಲ್ಲಿ ಉಚಿತವಾಗಿ ಔಷಧಿ ವಿತರಿಸಲಾಯಿತು.
ಸಂಸ್ಥೆಯ ಉಪಾಧ್ಯ ತಾತನಗೌಡ ಪಾಟೀಲ, ಸಂಸ್ಥೆಯ ಗೌರವ ಕಾರ್ಯದಶಿರ್ ಪ್ರಕಾಶ ಉಗಲಾಟದ ಇದ್ದರು.