ನವನಗರ ರೋಟರಿ ಶಾಲೆಯಲ್ಲಿ ಆರೋಗ್ಯ ಶಿಬಿರ

IMG-20251016-WA0031.jpg
Published on

ಹುಬ್ಬಳ್ಳಿ: ಮಕ್ಕಳು ಉತ್ತಮ ಆರೋಗ್ಯವನ್ನು ಬೆಳೆಸಿಕೊಳ್ಳಲು ಒಳ್ಳೆಯ ಆಹಾರ ಸೇವನೆ ಮಾಡಬೇಕು, ಹಣ್ಣುಗಳನ್ನು ತಿನ್ನಬೇಕು ಎಂದು ಮಕ್ಕಳ ತಜ್ಞ ಡಾ. ರಾಜನ್ ದೇಶಪಾಂಡೆ ಹೇಳಿದರು.

ಧಾರವಾಡದ ಮಕ್ಕಳ ಅಕಾಡೆಮಿ ರಜತ ಮಹೋತ್ಸವ ಅಂಗವಾಗಿ ಇಲ್ಲಿಯ ನವನಗರ ರೋಟರಿ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆಯಲ್ಲಿ ಬುಧವಾರ ಏರ್ಪಡಿಸಿದ್ದ ಆರೋಗ್ಯ ಶಿಬಿರದಲ್ಲಿ ಅವರು ಮಾತನಾಡಿದರು.

ಮಕ್ಕಳು ವಯಸ್ಸಿಗೆ ಅನುಗುಣವಾಗಿ ತೂಕ ಹೊಂದಬೇಕು, ತಮ್ಮ ಹಲ್ಲುಗಳನ್ನು ಅಂದವಾಗಿ ಹಾಗೂ ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

ನವನಗರ ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಬಿ.ಎಸ್. ಪಾಟೀಲ ಅವರು ಡಾ. ರಾಜನ್ ಅವರ ಸಾಮಾಜಿಕ ಸೇವೆ ಕೊಂಡಾಡಿದರು. ರೋಟರಿ ಶಾಲೆಯ ಆವರಣದಲ್ಲಿ ಸುಮಾರು 2 ಸಾವಿರ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಕೈಗೊಳ್ಳಲಾಯಿತು.

ಡಾ. ಪುರಾಣಿಕ, ಡಾ. ವಾಸವಾನಿ, ಡಾ. ಅಚ್ಯುತ, ಡಾ. ಹಲಸಂಗಿಮಠ, ಪ್ರಾಚಾರ್ಯ ಡಾ. ವಿಜಯಶ್ರೀ ಕಲಬುರ್ಗಿ, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶಿಕ್ಷಕ ಬಸವರಾಜ ಗೊಜನೂರ ಕಾರ್ಯಕ್ರಮ ನಿರೂಪಿಸಿದರು. ಆರ್.ಎಚ್. ರಿತ್ತಿ ಸ್ವಾಗತಿಸಿದರು. ರೋಟರಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ಕೆ.ಪಿ. ಅಣ್ಣಿಗೇರಿ ಪರಿಚಯಿಸಿದರು. ಗಣಕಯಂತ್ರ ವಿಭಾಗದ ಚೇರ್ಮನ್ ಡಾ. ಎನ್.ವಿ. ಸಾನು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net