ಹನಗೋಡು ಕಾಲೇಜಿನಲ್ಲಿ ಆರೋಗ್ಯ ತಪಾಸಣೆ

Arogya thapasane 1
ಹನಗೋಡಿನ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ಸಹಯೋಗದಲ್ಲಿ ಮೈಸೂರಿನ ಸಿದ್ದಗಂಗಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
Published on

 ಹನಗೋಡು: ಹನಗೋಡಿನ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆ ಸಹಯೋಗದಲ್ಲಿ ಮೈಸೂರಿನ ಸಿದ್ದಗಂಗಮ್ಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಶನಿವಾರ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪದವಿ ಪೂರ್ವ ಕಾಲೇಜಿನ ಸಿಡಿಸಿ ಉಪಾಧ್ಯಕ್ಷ ದಾ.ರಾ.ಮಹೇಶ್ ಉದ್ಘಾಟಿಸಿ ಮಾತನಾಡಿ, ನಾವು ಸಕಾಲದಲ್ಲಿ ನಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ಆರಂಭಿಕ ಹಂತದಲ್ಲೇ ರೋಗ ಪತ್ತೆ ಹಚ್ಚಿ ಗುಣಪಡಿಸಲು ಸಾಧ್ಯವಾಗಲಿದೆ. ಬಹುತೇಕ ಸಂದರ್ಭದಲ್ಲಿ ನಮ್ಮ ದೇಹದಲ್ಲಿ ಹಲವು ಸಮಸ್ಯೆಗಳಿದ್ದರೂ ಅವು ನಮ್ಮ ಅರಿವಿಗೆ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಆರೋಗ್ಯದ ವಿಚಾರದಲ್ಲಿ ಯಾವುದೇ ನಿರ್ಲಕ್ಷೃ ತೋರದೆ ಹೆಚ್ಚಿನ ನಿಗಾ ವಹಿಸಬೇಕಿದೆ ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ರಾಜೇಶ್ ಮಾತನಾಡಿದರು. ಶಿಬಿರದಲ್ಲಿ ಮೈಸೂರಿನ ರಾಜೇಶ್ ಕಣ್ಣಿನ ಆಸ್ಪತ್ರೆ ಹಾಗೂ ಜನರಲ್ ಮೆಡಿಸನ್ ವೈದ್ಯರು ಆರೋಗ್ಯ ತಪಾಸಣೆ ನಡೆಸಿ ಔಷಧವನ್ನು ಉಚಿತವಾಗಿ ವಿತರಿಸಿದರು. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಶಿಕ್ಷಕರು ಆರೋಗ್ಯ ತಪಾಸಣೆಗೆ ಒಳಗಾದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net