ಕಿಮ್ಸ್ ನಲ್ಲಿ ಪತ್ರಕರ್ತರ ಆರೋಗ್ಯ ತಪಾಸಣೆ

IMG-20240831-WA0036-1.jpg
Published on

ಹುಬ್ಬಳ್ಳಿ: ಇಲ್ಲಿಯ ಕಿಮ್ಸ್ ಮರು ನಾಮಕರಣ ಹಾಗೂ ಸಂಸ್ಥಾಪನಾ ದಿನದ ಅಂಗವಾಗಿ ಶನಿವಾರ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗಾಗಿ ಕಿಮ್ಸ್ ಆಡಳಿತ ಭವನದಲ್ಲಿ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.

ಅತಿಥಿಯಾಗಿದ್ದ ಕಿಮ್ಸ್ ನಿರ್ದೇಶಕ ಡಾ. ಎಸ್.ಎಫ್. ಕಮ್ಮಾರ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ಮಹಾ ಸಂಪತ್ತು. ವೈದ್ಯರಂತೆ ಮಾಧ್ಯಮದವರು ಸಹ ಬಿಡುವಿಲ್ಲದ ಕೆಲಸದಲ್ಲಿ ಇರುತ್ತಾರೆ. ಅವರಿಗೆ ತಮ್ಮಆರೋಗ್ಯದ ಬಗ್ಗೆ ಕಾಳಜಿ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ನಿಯಮಿತವಾಗಿ ಆರೋಗ್ಯ ತಪಾಸಣೆ ಅಗತ್ಯ ಎಂದರು.

ಪ್ರಾಂಶುಪಾಲ ಡಾ. ಈಶ್ವರ ಹೊಸಮನಿ ಹಾಗೂ ಪಿಎಂಎಸ್ವೈ ವೈದ್ಯಕಿಯ ಅಧಿಕ್ಷಕ ಡಾ. ರಾಜಶಂಕರ ಸಂಕಳ ಮಾತನಾಡಿ, ಸಮಾಜದ ಆಗುಹೋಗುಗಳನ್ನು ಸದಾ ಜನರ ಮುಂದೆ ಇಡುವ ಪತ್ರಕರ್ತರು, ಮಾಧ್ಯಮದವರು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ಅವರ ಆರೋಗ್ಯದತ್ತ ಗಮನಹರಿಸಲಿ ಎಂಬ ಕಾರಣದಿಂದ ಸೂಪರ್ ಸ್ಪೆಷಾಲಿಟಿ ಸೌಲಭ್ಯದೊಂದಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದರು.

ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಲೋಚನೇಶ ಹೂಗಾರ ಮಾತನಾಡಿ, ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ತಪಾಸಣೆ ಮಾಡಲು ಒಂದೇ ಛತ್ರದಡಿ ಎಲ್ಲ ವ್ಯವಸ್ಥೆ ಮಾಡಿರುವುದು ಎಲ್ಲರಿಗೂ ಅನುಕೂಲವಾಗಿದೆ. ಇದರಿಂದ ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳು ಕಂಡುಬಂದರೂ ಪರಿಹರಿಸಿಕೊಳ್ಳಲು ಸಹಾಯವಾಗಿದೆ ಎಂದರು.

ಶಿಬಿರಲ್ಲಿ 400ಕ್ಕೂ ಜನರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಸಂಘದ ಪ್ರಧಾನ ಕಾರ್ಯದರ್ಶಿ ಸುಶೀಲೇಂದ್ರ ಕುಂದರಗಿ ಮಾತನಾಡಿದರು.

ಕಿಮ್ಸ್ ವೈದ್ಯಕಿಯ ಅಧಿಕ್ಷಕ ಡಾ. ಈಶ್ವರ ಹಸಬಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಸ್ನಾತಕೋತ್ತರ ವಿದ್ಯಾಥಿರ್ಗಳು, ಸಿಬ್ಬಂದಿ ಇದ್ದರು. ಕಿಮ್ಸ್ ನೋಡಲ್ ಅಧಿಕಾರಿ ಡಾ. ರಾಜಶೇಖರ ದ್ಯಾಬೇರಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net