ಉಚಿತ ಆರೋಗ್ಯ ತಪಾಸಣೆ ಶಿಬಿರ

vishvannath
Health check up camp
Published on

ತೂಬಗೆರೆ: ಸುಮಾರು 15 ವರ್ಷಗಳಿಂದ ತೂಬಗೆರೆ ಜನತೆಗೆ ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸಿಕೊಂಡು ಬಂದಿದ್ದೇವೆ ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.
ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿಯ ಮೂಡ್ಲಪ್ಪ ವಿಶ್ವವಾಣಿ ಫೌಂಡೇಶನ್‌ನಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಪ್ರತಿವರ್ಷದಂತೆ ವಿಶ್ವವಾಣಿ ಫೌಂಡೇಶನ್‌ನಿಂದ ಉಚಿತ ಆರೋಗ್ಯ ತಪಾಸಣೆ ಮಾಡುತ್ತಿದ್ದು .ಶಿಬಿರದಲ್ಲಿ ಹೃದಯ ಸಮಸ್ಯೆ ಇರುವವರನ್ನು ತಪಾಸಣೆಗೆ ಒಳಪಡಿಸಿ ಅದರ ಚಿಕಿತ್ಸೆ ಉಚಿತವಾಗಿ ಮಾಡಿಕೊಡುತ್ತೇವೆ ಹಾಗೂ ನೇತ್ರ ತಪಾಸಣೆ ಮಾಡಿ ಉಚಿತ ಕನ್ನಡಕಗಳನ್ನು ನೀಡಲಾಗುತ್ತಿದೆ ಎಂದರು.
ಶಾಸಕ ಧೀರಜ್‌ಮುನಿರಾಜು, ಅಲೋಕ್ ವಿಶ್ವನಾಥ್, ಬಿಜೆಪಿ ಯುವ ಮುಖಂಡ ವಕೀಲ ಪ್ರತಾಪ್, ಮನಿಕೃಷ್ಣಪ್ಪ, ಕೃಷ್ಣಪ್ಪ, ನಾಗರಾಜು, ಮುಖಂಡರಾದ ಗಂಗರಾಜು, ಸಿದ್ದರಾಜು, ಸುರೇಶ್, ಬಸವರಾಜು, ಶರತ್‌ಗೌಡ, ಕಾಂತರಾಜು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net