ಅ೨೩ರಂದು ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ba68bf39-5b69-4e35-a443-28c43b6d61c5
Published on

ಮಡಿಕೇರಿ: ೭ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ನೀಮಾ ಕೊಡಗು ವತಿಯಿಂದ ಅ೨೩ರಂದು ನಗರದ ಕೆಳಗಿನ ಗೌಡ ಸಮಾಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಡಾ.ಎ.ಆರ್.ರಾಜಾರಾಂ ತಿಳಿಸಿದರು.


ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಯುರ್ವೇದದ ಆದಿ ದೇವನಾದ ಶ್ರೀ ಧನ್ವಂತರಿ ಜಯಂತಿಯನ್ನು ಭಾರತ ಸರ್ಕಾರ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನಾಗಿ ಆಚರಿಸುತ್ತಿದೆ. ಈ ಹಿನ್ನೆಲೆ ಜಿಲ್ಲಾಡಳಿತ, ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಅಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ ಎಂದು ತಿಳಿಸಿದರು.


ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ, ಕೊಡಗು ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ವಸಂತ್ ಕುಮಾರ್, ರೋಟರಿ ವುಡ್ ಅಧ್ಯಕ್ಷ ಸಂಪತ್ ಕುಮಾರ್, ಕೊಡಗು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿಯ ಪ್ರ.ಕಾರ್ಯದರ್ಶಿ ಅರುಣ್ ಕೂರ್ಗ್, ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ರವೀಂದ್ರ ರೈ, ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net