ಶಿಕ್ಷಕಿಯರಿಗೆ ಆರೋಗ್ಯ ತಪಾಸಣಾ ಶಿಬಿರ

HUN-FEB-4-1(HEALTH CAMP)
ಹುಣಸೂರು ನಗರದ ಗುರುಭವನದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಹಿಳಾ ಶಿಕ್ಷಕಿಯರಿಗೆ ಆರೋಗ್ಯ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
Published on

ಹುಣಸೂರು: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು, ಲಿಪಿಕ ನೌಕರರು ಮತ್ತು ಅಡುಗೆ ಸಿಬ್ಬಂದಿಗೆ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ 200ಕ್ಕೂ ಹೆಚ್ಚು ಮಂದಿ ತಪಾಸಣೆಗೊಳಗಾದರು.

ನಗರದ ಗುರುಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಶಿಬಿರದಲ್ಲಿ ನಗರದ ಸಾರ್ವಜನಿಕ ಆಸ್ಪತ್ರೆ ವೈದ್ಯ ಡಾ.ಚಂದ್ರಶೇಖರ್, ಕಾವೇರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಡಾ.ಸಿಂಚನಾ ತಪಾಸಣೆ ನಡೆಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ ಮಾತನಾಡಿ, ಮಹಿಳಾ ಶಿಕ್ಷಕಿಯರು ಶಾಲಾ ಪರಿಸರದಲ್ಲಿ ಅತ್ಯಂತ ಕಾಳಜಿ ಮತ್ತು ಸಾಕಷ್ಟು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸುತ್ತಿರುತ್ತಾರೆ. ಅವರ ಕರ್ತವ್ಯಪ್ರಜ್ಞೆ ಮತ್ತು ವಿದ್ಯಾರ್ಥಿಗಳ ಕುರಿತಾದ ಕಾಳಜಿ ಅನನ್ಯ. ಇಂತಹ ಪರಿಸ್ಥಿತಿಯಲ್ಲಿ ತಮ್ಮ ಆರೋಗ್ಯದ ಕುರಿತು ಕಡೆಗಣಿಸುವ ಸಂಭವವೂ ಹೆಚ್ಚಾಗಿರುತ್ತದೆ. ಹಾಗಾಗಿ ಮಹಿಳಾ ಶಿಕ್ಷಕಿಯರು ಮತ್ತು ಸಿಬ್ಬಂದಿಗಾಗಿ ಇಲಾಖೆ ವತಿಯಿಂದ ಶಿಬಿರ ಆಯೋಜಿಸುವ ಮೂಲಕ ಆರೋಗ್ಯ ಕಾಳಜಿ ವಹಿಸಲಾಗಿದೆ ಎಂದರು.

ಡಾ.ಚಂದ್ರಶೇಖರ್ ಕ್ಯಾನ್ಸರ್ ರೋಗದ ಕುರಿತು ಮಾಹಿತಿ ನೀಡಿದರು. ಸಾವಿತ್ರಿಬಾಯಿ ಫುಲೆ ಸಂಘದ ಅಧ್ಯಕ್ಷೆ ಕೌಸಲ್ಯಾ, ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹದೇವ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷೆ ಜ್ಯೋತಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಲೋಕೇಶ್, ಶಿಕ್ಷಣ ಸಂಯೋಜಕರಾದ ರುದ್ರಪ್ಪ, ಕೇಶವಮೂರ್ತಿ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಮೋಹನ್‌ರಾಜ್, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಹರೀಶ್, ಬಿಆರ್‌ಪಿಗಳು ಮತ್ತು ಶಿಕ್ಷಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net