ಬಂಗಾಡಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ

health check up
Published on

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ, ಇಂದಬೆಟ್ಟು ವಲಯ ರೋಟರಿ ಕ್ಲಬ್ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಕಾರದೊಂದಿಗೆ ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣಾ ಶಿಬಿರ ಬಂಗಾಡಿ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಬಂಗಾಡಿ ಅರಮನೆಯ ಅರಸರಾದ ಯಶೋಧರ ಬಲ್ಲಾಳ್ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಯೋಜನಾಧಿಕಾರಿ ಯಶೋಧರ ಸಂಪೂರ್ಣ ಸುರಕ್ಷಾ ಸೌಲಭ್ಯದ ಬಗ್ಗೆ ಮಾಹಿತಿ ನೀಡಿದರು. ಎಸ್‌ಡಿಎಂ ಆಸ್ಪತ್ರೆಯ ಸಂಪರ್ಕಾಧಿಕಾರಿ ಜಯಾನಂದ್, ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ ಪ್ರಭು ಟಿ., ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ ಮಾತನಾಡಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಜಲು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಶುಭಾಷ್ ಜಾದವ್, ರೋಟರಿ ಕ್ಲಬ್ ಕಾರ್ಯದರ್ಶಿ ಡಾ.ಎಂ.ಎಂ.ದಯಾಕರ್, ಒಕ್ಕೂಟ ಅಧ್ಯಕ್ಷ ವಿಶ್ವನಾಥ ಗೌಡ, ಪ್ರಸಾದ್, ವಲಯ ಜನಜಾಗೃತಿ ಸಮಿತಿ ಸದಸ್ಯರಾದ ಗೋವಿಂದಮೂಲ್ಯ, ವೀರಪ್ಪ ಮೊಯ್ಲಿ, ಪ್ರಮುಖರಾದ ಲಕ್ಷ್ಮಣ ಗೌಡ ಇರ್ತಿಲಾಲ್, ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ವಿಶ್ವನಾಥ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮಾನಂದ, ಲಯನ್ಸ್ ಕ್ಲಬ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಕ್ಕಳ ತಜ್ಞ ಡಾ.ಪ್ರತೀತ್, ಮೂಳೆ ತಜ್ಞ ಡಾ.ರಜತ್, ಕಣ್ಣಿನ ತಜ್ಞ ಡಾ.ಶುಭಾಸ್ ಚಂದ್ರ, ಚರ್ಮ ರೋಗ ತಜ್ಞ ಡಾ.ರೋಹನ್ ದೀಕ್ಷಿತ್, ಮೆಡಿಸಿನ್ ಜನರಲ್ ಡಾ.ಅಭಿಜ್ಞಾ ಮತ್ತು ತೃಪ್ತಿ ಆಳ್ವ, ಆಸ್ಪತ್ರೆಯ ಸಿಬ್ಬಂದಿ ವರ್ಗದವರು ತಪಾಸಣೆ ನಡೆಸಿಕೊಟ್ಟರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಮಧುರಾ ವಸಂತ್ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಉಷಾ ಪ್ರಸಾದ್ ವಂದಿಸಿದರು. ಶಿಕ್ಷಕ ಅಮಿತಾನಂದ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net