ಪಡುಕರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

kota (1)
Published on

ಕೋಟ: ಶಿಕ್ಷಕರು ಸವಾಜದ ಸ್ವಾಸ್ಥ್ಯವನ್ನು ಕಾಪಾಡುವವರು. ಅವರ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಹೇಳಿದರು.

ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ನೇತೃತ್ವದಲ್ಲಿ ಕೋಟ ಸಮುದಾಯ ಆರೋಗ್ಯ ಕೇಂದ್ರ ಸಹಕಾರದಲ್ಲಿ ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮಣೂರು ಪಡುಕರೆಯಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶನಿವಾರ ಮಣೂರು ಸಮುಚ್ಚಯ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

ಭಾಗವಹಿಸಿದ ಎಲ್ಲ ಶಿಬಿರಾರ್ಥಿಗಳಿಗೆ ರಕ್ತಚಂದನ ಗಿಡ ಮತ್ತು ಬಟ್ಟೆ ಚೀಲಗಳನ್ನು ನೀಡಲಾಯಿತು.

ಪ್ರಾಂಶುಪಾಲ ಡಾ. ರಾಜೇಂದ್ರ ಎಸ್.ನಾಯಕ್, ಪಪೂ ಕಾಲೇಜು ಪ್ರಾಂಶುಪಾಲ ಡೆನ್ನಿಸ್ ಬಾಂಜಿ, ಪ್ರೌಢ ಶಾಲೆ ಹಿರಿಯ ಶಿಕ್ಷಕ ರಾಮದಾಸ್ ನಾಯಕ್, ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಮಂಜುನಾಥ್ ಹೊಳ್ಳ, ಹೈಸ್ಕೂಲ್ ಎಸ್‌ಡಿಎಂಸಿ ಅಧ್ಯಕ್ಷ ನಾಗರಾಜ್ ಇದ್ದರು.

ಗೀತಾನಂದ ಸಂಸ್ಥೆ ಸಂಯೋಜಕರಾದ ರವಿಕಿರಣ್ ನಿರೂಪಿಸಿ. ದೀಕ್ಷಿತಾ ಸಹಕರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net