ಸೆ.೧೯ರಂದು ಆರೋಗ್ಯ ತಪಾಸಣಾ ಶಿಬಿರ

logo
Published on

ಮಡಿಕೇರಿ: ಕೊಡಗು ಪತ್ರಕರ್ತರ ಸಂಘ, ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿಯಿಂದ ೨೦೨೫ರ ಸೆ.೧೯ನೇ ತಾರೀಕು ಶುಕ್ರವಾರದಂದು ಮಡಿಕೇರಿಯ ಕಾವೇರಿ ಹಾಲ್‌ನಲ್ಲಿ ಪತ್ರಕರ್ತರು, ಪತ್ರಕರ್ತರ ಕುಟುಂಬ ವರ್ಗದವರು, ಪತ್ರಿಕಾ ಕ್ಷೇತ್ರದ ಸಿಬ್ಬಂದಿಗಳು, ಪತ್ರಿಕಾ ವಿತರಕರು ಹಾಗೂ ಕುಟುಂಬದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ ಎಂದು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷ ಜಿ.ವಿ.ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆಯ ೧೫ ವಿಭಾಗಗಳ ನುರಿತ ತಜ್ಞರುಗಳು ಹಾಗೂ ವೈದ್ಯರುಗಳು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. ನೇತ್ರ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು, ಇ.ಎನ್.ಟಿ. ತಜ್ಞರು, ಶ್ವಾಸಕೋಶ ತಜ್ಞರು, ದಂತ ವೈದ್ಯಕೀಯ, ಶಸ್ತ್ರ ಚಿಕಿತ್ಸಕರು, ಮಕ್ಕಳ ತಜ್ಞರು, ಸ್ತ್ರೀರೋಗ ತಜ್ಞರು, ಶ್ರವಣ ಆರೋಗ್ಯ ತಜ್ಞರು, ಮಾನಸಿಕ ಆರೋಗ್ಯ ತಜ್ಞರು ಮುಂತಾದ ೧೫ ವಿಭಾಗಗಳ ನುರಿತ ತಜ್ಞರು ಈ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಆರೋಗ್ಯಕ್ಕೆ ಸಂಬಂಧಿಸಿದ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಲು ಆಯುಷ್ಮಾನ್ ಭಾರತ್ ಯೋಜನಾಧಿಕಾರಿ ಕೂಡ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಡಿಕೇರಿಯ ಪತ್ರಿಕಾ ಭವನ ಸಮೀಪದ ಕಾವೇರಿ ಹಾಲ್‌ನಲ್ಲಿ ಬೆಳಗ್ಗೆ ೯ ರಿಂದ ಮಧ್ಯಾಹ್ನ ೨ ಗಂಟೆಯವರಗೆ ಈ ಶಿಬಿರ ನಡೆಯಲಿದೆ. ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆಯ ಡೀನ್ ನಿರ್ದೇಶಕರಾದ ಡಾ.ಲೋಕೇಶ್.ಎ.ಜೆ, ವೈದ್ಯಕೀಯ ಅಧೀಕ್ಷಕ ಡಾ.ಎಚ್.ಕೆ.ಸೋಮಶೇಖರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ ಹಾಗೂ ತುರ್ತು ಚಿಕಿತ್ಸಾ ಘಟಕದ ಮುಖ್ಯಸ್ಥರಾದ ಡಾ.ಮೋಹನ್ ಅಪ್ಪಾಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯ ವಿಷಯಕ್ಕೆ ಸಂಬಂಧಿಸಿದ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net