20ರಂದು ಆರೋಗ್ಯ ತಪಾಸಣಾ ಶಿಬಿರ

13 KRP 3
Published on

ಕೆ.ಆರ್.ಪೇಟೆ: ಮಲ್ಲಿಕಾರ್ಜುನ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಮೇ 20ರಂದು ಪಟ್ಟಣದ ಟ್ರಸ್ಟ್ ಆವರಣದಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಬಿಜಿಎಸ್ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಧಮೇರ್ಂದ್ರ ತಿಳಿಸಿದರು.

ಆದಿಚುಂಚನಗಿರಿ ಆಸ್ಪತ್ರೆ, ಕಿದ್ವಾಯಿ ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆ, ಬಿಜಿಎಸ್ ಆಸ್ಪತ್ರೆ, ನಿಮ್ಹಾನ್ಸ್, ಮಿಂಟೋ ಆಸ್ಪತ್ರೆಗಳ 500ಕ್ಕೂ ಹೆಚ್ಚು ನುರಿತ ವೈದ್ಯರು ಭಾಗವಹಿಸಲಿದ್ದಾರೆ. ಆರೋಗ್ಯ ಉಚಿತ ತಪಾಸಣಾ ಶಿಬಿರದಲ್ಲಿ 10 ರಿಂದ15 ಸಾವಿರ ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗುತ್ತದೆ. ಈ ಶಿಬಿರದಲ್ಲಿ ಕೀಲು ಮತ್ತು ಮೂಳೆ, ಹೃದಯ, ನರರೋಗ, ಮಧುಮೇಹ, ಮೂತ್ರಪಿಂಡ ತಜ್ಞರು, ಸಾಮಾನ್ಯ ವೈದ್ಯಕೀಯ ತಜ್ಞರು ಭಾಗವಹಿಸಲಿದ್ದಾರೆ. ಉಚಿತವಾಗಿ ಔಷಧಿ, ಮಾತ್ರೆಗಳನ್ನು ನೀಡಲಾಗುವುದು. ಕಣ್ಣಿನ ಆಪರೇಷನ್ ಅವಶ್ಯಕತೆ ಇದ್ದವರಿಗೆ ಶಸ್ತ್ರ ಚಿಕಿತ್ಸೆಯ ನಂತರ ಉಚಿತ ಕನ್ನಡಕ ನೀಡಲಾಗುವುದು. ವಿವಿಧ ತಪಾಸಣಾ ಶಿಬಿರದಲ್ಲಿ ಹೆಚ್ಚಿನ ಚಿಕಿತ್ಸೆಗೆ ಒಳಪಡುವವರಿಗೆ ವಾಹನ ಸೌಲಭ್ಯ, ಊಟ, ರಕ್ತ, ಮೂತ್ರ ಪರೀಕ್ಷೆ, ಆಪರೇಷನ್ ಮುಂತಾದುವುಗಳನ್ನು ಉಚಿತವಾಗಿ ಮಾಡಿಸಿಕೊಡಲಾಗುವುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆರ್.ಟಿ.ಒ ಅಧಿಕಾರಿ ಮಲ್ಲಿಕಾರ್ಜುನ್, ಡಾ.ಸೋಮಶೇಖರ್, ಶಿವಕುಮಾರ್, ಪಾಂಡು, ಚಾರಿಟಬಲ್ ಟ್ರಸ್ಟ್ ಗೌರವಾಧ್ಯಕ್ಷ ಜಯರಾಮ್ ನಲ್ಲಿತ್ತಾಯ, ಗಿರೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net