ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ

23-npk-1
Published on

ನಾಪೋಕ್ಲು: ಮಡಿಕೇರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮೂರ್ನಾಡು ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಅನಿಮಿಯಾಮುಕ್ತ ಪೌಷ್ಟಿಕ ಕರ್ನಾಟಕ ಎಂಬ ಕಾರ್ಯಕ್ರಮ ನಡೆಯಿತು.

ಮಡಿಕೇರಿ ಆರೋಗ್ಯ ಇಲಾಖೆಯ ಆರ್‌ಬಿಎಸ್‌ಕೆ ತಂಡ ವಿದ್ಯಾರ್ಥಿಗಳಿಗೆ ರಕ್ತ ಪರೀಕ್ಷೆಯನ್ನು ನಡೆಸಿ ಅಪೌಷ್ಟಿಕದಿಂದ ಬಳಲುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಹಿಮೋಗ್ಲೋಬಿನ್ ಅಂಶ ಕಡಿಮೆ ಇರುವ ವಿದ್ಯಾರ್ಥಿಗಳಿಗೆ ಮಾತ್ರೆಗಳನ್ನು ನೀಡಿ ಅವರ ಆರೋಗ್ಯ ತಪಾಸಣೆ ನಡೆಸಲಾಯಿತು. ಮಡಿಕೇರಿ ಆರೋಗ್ಯ ಇಲಾಖೆಯ ಡಾ.ಪೂಜಾ ಹಾಗೂ ಡಾ.ಲಾವಣ್ಯ, ಸಿಬ್ಬಂದಿ ಅಗತ್ಯ ಸಲಹೆ ಸೂಚನೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net