ನಗರಸಭೆಯಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ

udp-24-cmc
Published on

ಉಡುಪಿ: ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಡುತ್ತಾರೆ. ಇದರಿಂದ ನಮ್ಮೆಲ್ಲರ ಆರೋಗ್ಯ ಉತ್ತಮವಾಗಿದೆ. ಕೆಲಸದ ಒತ್ತಡದಲ್ಲಿ ರ್ನಿಲಕ್ಷ$್ಯತನದಿಂದ ಆರೋಗ್ಯ ಹಾಳಾಗುತ್ತಿದೆ. ಪೌರಕಾರ್ಮಿಕರು ನಿತ್ಯ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ. ಗಡಾದ್​ ಹೇಳಿದರು.

ಮಂಗಳವಾರ ನಗರಸಭೆ ವತಿಯಿಂದ ಸ್ವಭಾವ ಸ್ವಚ್ಛತೆ-&ಸಂಸ್ಕಾರ ಸ್ವಚ್ಛತೆ ಎಂಬ ಧ್ಯೇಯ ವಾಕ್ಯದೊಂದಿಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ-&2024 ಹಾಗೂ ಪೌರಕಾರ್ಮಿಕರ ಸಾಮಾನ್ಯ ಆರೋಗ್ಯ ತಪಾಸಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಸರ್ಜನ್​ ಡಾ. ಅಶೋಕ್​ ಮಾತನಾಡಿ, ಪೌರಕಾರ್ಮಿಕರು ಆರೋಗ್ಯ ಪೂರ್ಣವಾಗಿದ್ದರೆ ನಗರದ ಸ್ವಚ್ಛತೆಯನ್ನು ಕಾಪಾಡಿ ಎಲ್ಲರ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ. ಜಿಲ್ಲಾಸ್ಪತ್ರೆಯಲ್ಲಿರುವ ಆರೋಗ್ಯ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಗರಸಭಾ ಪೌರಾಯುಕ್ತ ರಾಯಪ್ಪ ಮಾತನಾಡಿ, ಇಂದಿನ ಜೀವನ ಶೈಲಿಯಿಂದ ಕಾಯಿಲೆಗಳು ನಮ್ಮನ್ನು ಆಳುವಂತಾಗಿದೆ. ದುಶ್ಚಟಗಳಿಂದ ದೂರ ಇದ್ದಾಗ ಉತ್ತಮ ಆರೋಗ್ಯ ಹೊಂದಬಹುದಾಗಿದೆ. ಪೌರ ಕಾರ್ಮಿಕರು ಉತ್ತಮ ಆಹಾರ ಸೇವಿಸುವುದರೊಂದಿಗೆ ತಮ್ಮ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಣಿಪಾಲದ ಪಬ್ಲಿಕ್​ ಹೆಲ್ತ್​ ಡೆಂಟಿಸ್ಟ್​ ಡಾ. ಅನುಷಾ, ಪ್ರಸಾದ್​ ನೇತ್ರಾಲಯದ ವೈದ್ಯೆ ಡಾ. ಕೀರ್ತಿ, ಜಿಲ್ಲಾ ಕನ್ಸಲ್ಟೆಂಟ್​ ಮಂಜುಳಾ ಶೆಟ್ಟಿ, ನಗರಸಭೆಯ ವ್ಯವಸ್ಥಾಪಕ ಎಸ್​.ಎಸ್​ ನಾರಾಯಣ, ಆರೋಗ್ಯ ನಿರೀಕ್ಷಕರಾದ ಮನೋಹರ್​, ಸುರೇಂದ್ರ ಹೋಬಳಿದಾರ್​, ಹರೀಶ್​ ಬಿಲ್ಲವ ಮೊದಲಾದವರು ಉಪಸ್ಥಿತರಿದ್ದರು.ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಸಭೆಯ ಪರಿಸರ ಇಂಜಿನಿಯರ್​ ಸ್ನೇಹಾ ಕೆ.ಎಸ್​ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net