ನರೇಗಾ ಕೂಲಿಕಾರರ ಆರೋಗ್ಯ ತಪಾಸಣೆ ಕಡ್ಡಾಯ

RTL BANAKAR VISIT
Published on

ರಟ್ಟಿಹಳ್ಳಿ: ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕೂಲಿ ಕೆಲಸದಲ್ಲಿ ನಿರತರಾಗಿದ್ದ ತಾಲೂಕಿನ ಸತ್ತಗೀಹಳ್ಳಿ ಗ್ರಾಮದ ಮಹಿಳೆಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವ್ವ ಹೇಳಿದರು.

ತಾಲೂಕಿನ ಶಿರಗಂಬಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸತ್ತಗೀಹಳ್ಳಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆ ರೇಣುಕಮ್ಮ ನಿಂಗಪ್ಪ ಕುರುಬರ (63) ಕುಸಿದು ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಮೃತಪಟ್ಟ ಸ್ಥಳಕ್ಕೆ ಶಾಸಕ ಯು.ಬಿ. ಬಣಕಾರ ಭೇಟಿ ನೀಡಿ ಪರಿಶೀಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬಳಿಕ ಮಾತನಾಡಿದ ಶಾಸಕರು, ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದಾಗ ಕೂಲಿ ಕಾರ್ವಿುಕರ ಆರೋಗ್ಯವನ್ನು ಕಡ್ಡಾಯವಾಗಿ ತಪಾಸಣೆ ಮಾಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೂಲಿಕಾರರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಸೂಕ್ತ ಆರೋಗ್ಯ ಚಿಕಿತ್ಸೆ ಕೊಡುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಮಹೇಶ ಗುಬ್ಬಿ, ತಾಪಂ ಸಹಾಯಕ ನಿರ್ದೇಶಕ ಪ್ರದೀಪ ಗಣೇಶ್ಕರ್, ಗ್ರಾಪಂ ಸದಸ್ಯರು, ಶಿರಗಂಬಿ, ಸತ್ತಗೀಹಳ್ಳಿ ಗ್ರಾಮದ ಮುಖಂಡರು, ಅಧಿಕಾರಿಗಳು, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net