

ಕುಶಾಲನಗರ: ತಾಲೂಕು ಆರೋಗ್ಯಧಿಕಾರಿ ಕಚೇರಿ, ಪುರಸಭೆ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ವತಿಯಿಂದ ಮಂಗಳವಾರ ಪುರಸಭಾ ಸಭಾಂಗಣದಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲೂಕು ಆರೋಗ್ಯಧಿಕಾರಿ ಡಾ.ಇಂದೂಧರ್,ವರ್ಷಕ್ಕೆ ಎರಡು ಬಾರಿ ರಕ್ತ ಪರೀಕ್ಷೆ, ರಕ್ತದೊತ್ತಡದ ಪರೀಕ್ಷೆ, ದಂತ ಪರೀಕ್ಷೆ ಹಾಗೂ ಇತರ ಆರೋಗ್ಯ ಸಮಸ್ಯೆಗಳ ಪರೀಕ್ಷೆ ಮಾಡಿಸಬೇಕು. ಯಾವುದೇ ಕಾಯಿಲೆ ಪ್ರಾರಂಭದ ಹಂತದಲ್ಲಿ ಪತ್ತೆಯಾದಲ್ಲಿ ಕೂಡಲೇ ಚಿಕಿತ್ಸೆ ನೀಡಿ ಗುಣಪಡಿಸಲು ಅನುಕೂಲ ಎಂದರು.
ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಡಾ.ಅಂಜಲಿ ಕೃಷ್ಣಯ್ಯ, ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಹಾಗೂ ಪುರಸಭೆ ಆರೋಗ್ಯಧಿಕಾರಿ ಉದಯ್ ಕುಮಾರ್ ಇತರರಿದ್ದರು.