

ಮಂಡ್ಯ: ಮನೆ ಬಳಿಗೆ ಬರುವ ಆರೋಗ್ಯ ಉಚಿತ ಸೇವೆಯನ್ನು ವೃದ್ಧರು ಮತ್ತು ಉತ್ತಮ ರೀತಿ ಬಳಕೆ ಮಾಡಿಕೊಳ್ಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ ಸಲಹೆ ನೀಡಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವಿಕಸನ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಗಾಂಧಿನಗರ ಅಭಿವೃದ್ಧಿ ಸಂಘದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ಒಬ್ಬ ವ್ಯಕ್ತಿ ಕಾಯಿಲೆಯಿಂದ ನರಳುತ್ತಿದ್ದು ಖಾಸಗಿ ನರ್ಸಿಂಗ್ ಹೋಂ ಮತ್ತು ಕ್ಲಿನಿಕ್‌ಗಳಿಗೆ ಹೋಗಿ ವೈದ್ಯರ ಸಲಹೆ ಪಡೆಯಬೇಕೆಂದರೆ 200 ರೂನಿಂದ 500 ರೂವರೆಗೆ ನೀಡಬೇಕಾದ ಪರಿಸ್ಥಿತಿ ಇದೆ. ಆದ್ದರಿಂದ ಇಂತಹ ಸಂಘ ಸಂಸ್ಥೆಗಳು ಉಚಿತವಾಗಿ ಸೇವೆಗಳನ್ನು ನೀಡುವುದನ್ನ ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದರು.
ಸಂಘದ ಅಧ್ಯಕ್ಷ ಎಚ್.ಲೋಕೇಶ್ವರ್, ಪ್ರಧಾನ ಕಾರ್ಯದರ್ಶಿ ಎಂ.ಎಲ್.ತುಳಸಿಧರ್, ತಮ್ಮಣ್ಣರಾಜ್, ಅನುರಾಧಾ, ಡಾ.ಮಧುಸೂದನ್, ನಿರಂಜನ್, ರಾಧಾ ಇದ್ದರು. ಶಿಬಿರದಲ್ಲಿ 150ಕ್ಕೂ ಹೆಚ್ಚು ಸಾರ್ವಜನಿಕರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.