ಮನುಷ್ಯನಿಗೆ ಆರೋಗ್ಯ ಸಂಪತ್ತೇ ಮುಖ್ಯ: ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಅಭಿಮತ

HC
Published on

ಪಾಂಡವಪುರ: ತಾಲೂಕಿನ ಬೇಬಿ ಗ್ರಾಮದ ದುರ್ದಂಡೇಶ್ವರ ಮಹಂತ ಶಿವಯೋಗಿ ಮಠ, ರೋಟರಿ ಚಂದ್ರವನ ಹಾಗೂ ಸಪ್ತಗಿರಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರ ಸಹಯೋಗದಲ್ಲಿ ಗ್ರಾಮದ ಡಿಎಂಎಸ್ ಜ್ಞಾನ ಕುಟೀರ ಶಾಲೆಯ ಆವರಣದಲ್ಲಿ ಬೃಹತ್ ಆರೋಗ್ಯ ಉಚಿತಾ ತಪಾಸಣಾ ಶಿಬಿರವನ್ನು ಭಾನುವಾರ ಆಯೋಜಿಸಲಾಗಿತ್ತು.
ಚಂದ್ರವನ ಹಾಗೂ ದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ಪೀಠಾಧ್ಯಕ್ಷ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಎಲ್ಲ ಸಂಪತ್ತುಗಳಿಗಿಂತ ಮನುಷ್ಯನಿಗೆ ಆರೋಗ್ಯ ಸಂಪತ್ತು ಮುಖ್ಯ. ಆರೋಗ್ಯ ಸಮಸ್ಯೆಯಿಂದ ನಿಶಕ್ತನಾಗಿ ಆಸ್ಪತ್ರೆಯಲ್ಲಿ ಮಲಗಿದ ಮನುಷ್ಯನಿಗೆ ಇಷ್ಟೇ ಬದುಕು ಎಂಬ ಸತ್ಯ ತಿಳಿಯುತ್ತದೆ. ಮುಪ್ಪಿನವರೆಗೂ ಸಂಪಾದನೆ ಮಾಡುವುದರಲ್ಲೇ ಕಾಲ ಕಳೆಯುತ್ತಾ ಆರೋಗ್ಯ ನಿರ್ಲಕ್ಷಿಸಬಾರದು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net