

ಮಡಿಕೇರಿ:
ಕೊಡಗು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಮತ್ತು ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ಕೊಡಗು ಘಟಕದ ಸಂಯುಕ್ತಾಶ್ರಯದಲ್ಲಿ ಆ.15 ರಂದು ಮಡಿಕೇರಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಕವಿಗೋಷ್ಠಿ ಹಾಗೂ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ ನಡೆಯಲಿದೆ ಎಂದು ಟ್ರಸ್ಟ್ ಸ್ಥಾಪಕಾಧ್ಯಕ್ಷೆ ಈರಮಂಡ ಹರಿಣಿ ವಿಜಯ್ ತಿಳಿಸಿದ್ದಾರೆ. ನಗರದ ಪೊಲೀಸ್ ಮೈತ್ರಿ ಭವನದಲ್ಲಿ ಅಂದು ಬೆಳಗ್ಗೆ 10 ಗಂಟೆಯಿAದ ಮಧ್ಯಾಹ್ನ 1.30ರ ವರೆಗೆ ಉಚಿತ ವೈದ್ಯಕೀಯ ಮತ್ತು ಶಸ್ತçಚಿಕಿತ್ಸಾ ಶಿಬಿರ ನಡೆಯಲಿದೆ. ಕೊಡಗು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರ್‌ರಾಜ್ ಧ್ವಜಾರೋಹಣ ನೆರವೇರಿಸಿ ವೈದ್ಯಕೀಯ ಶಿಬಿರ ಉದ್ಘಾಟಿಸಲಿದ್ದಾರೆ. ಕವಿಗೋಷ್ಠಿ ಮತ್ತು ದೇಶಭಕ್ತಿ ಗಾಯನ ಸ್ಪರ್ಧೆಯನ್ನು ವಿಶೇಷ ಆಹ್ವಾನಿತರು ಹಾಗೂ ತೀರ್ಪುಗಾರರಾದ ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ಕನ್ನಡ ಸರಿಗಮಪ ಖ್ಯಾತಿಯ ಅನ್ವಿತ್ ಕುಮಾರ್ ಉದ್ಘಾಟಿಸಲಿದ್ದಾರೆ.
77ನೇ ಸ್ವಾತಂತ್ರö್ಯ ದಿನಾಚರಣೆ ಪ್ರಯುಕ್ತ ನಮ್ಮ ದೇಶದ ಆಂತರಿಕ ಭದ್ರತೆ ನಿರ್ವಹಿಸುತ್ತಿರುವ ಜಿಲ್ಲೆಯ ಪೊಲೀಸ್, ಗೃಹ-ರಕ್ಷಕರು, ಅಗ್ನಿಶಾಮಕ ದಳ ಮತ್ತು ಜಿಲ್ಲಾ ಕಾರಾಗೃಹದ ಅಧಿಕಾರಿ ಸಿಬ್ಬಂದಿ ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ತಪಾಸಣಾ ಶಿಬಿರ, ಸಾರ್ವಜನಿಕರಿಗೆ ಕವಿಗೋಷ್ಠಿ ಹಾಗೂ ದೇಶ ಭಕ್ತಿ ಗೀತೆ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಕವಿಗೋಷ್ಠಿಯಲ್ಲಿ ಯಾವುದೇ ವಯೋಮಾನದವರು ಭಾಗವಹಿಸಬಹುದು. ಆಸಕ್ತ ಕವಿ-ಕವಿಯತ್ರಿಯರು ಸ್ವಾತಂತ್ರö್ಯ ದಿನಾಚರಣೆ ಅಥವಾ ಸ್ವಾತಂತ್ರö್ಯ ಹೋರಾಟಗಾರರ ಕುರಿತು ರಚಿಸಿದ ತಮ್ಮ ಸ್ವರಚಿತ 20 ಸಾಲುಗಳ ಮಿತಿ ಒಳಗಿನ ಕವಿತೆಯನ್ನು ವಾಚಿಸಬಹುದು. 6ನೇ ತರಗತಿಯಿಂದ 10ನೇ ತರಗತಿಯಲ್ಲಿರುವ ಮಕ್ಕಳಿಗೆ ಹಾಗೂ 18 ವರ್ಷದಿಂದ ಮೇಲ್ಪಟ್ಟವರಿಗೆ ದೇಶಭಕ್ತಿ ಗೀತೆ ಸ್ಪರ್ಧೆಯನ್ನು ಎರಡು ವಿಭಾಗದಲ್ಲಿ ನಡೆಸಲಾಗುವುದೆಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು ಆ.13ರ ಒಳಗೆ ಹೆಸರನ್ನು ಮೊ.9740970840 ಹಾಗೂ ಉಚಿತ ವೈದ್ಯಕೀಯ ಮತ್ತು ಶಸ್ತçಚಿಕಿತ್ಸಾ ಶಿಬಿರಕ್ಕೆ ನೋಂದಾಯಿಸಲು ಮತ್ತು ಮಾಹಿತಿಗಾಗಿ ಮೊ.8792874030 ಸಂಪರ್ಕಿಸಬಹುದಾಗಿದೆ. ಶಿಬಿರ ಹಾಗೂ ಸ್ಪರ್ಧೆಗಳು ಪೂರ್ಣಗೊಂಡ ನಂತರ ತಮ್ಮ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಮಡಿಕೇರಿ ತಾಲೂಕು ಜನಪದ ಪರಿಷತ್ ಅಧ್ಯಕ್ಷ ಹೆಚ್.ಟಿ. ಅನಿಲ್, ಐಎಂಒ ಕೊಡಗು ಘಟಕ ಅಧ್ಯಕ್ಷ ಡಾ.ಶ್ಯಾಮ್ ಅಪ್ಪಣ್ಣ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಪತ್ರಕರ್ತರ ಜಿ.ರಾಜೇಂದ್ರ, ಅಂತರಾಷ್ಟಿçÃಯ ಬ್ಯಾಡ್ಮಿಂಟನ್ ಆಟಗಾರ್ತಿ ತಾತಪಂಡ ಜ್ಯೋತಿ ಸೋಮಯ್ಯ, ಡಾ. ರಾಘವನ್ ಹಾಗೂ ಡಾ.ಮೋಹನ್ ಅಪ್ಪಾಜಿ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು.
ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ನ ಟ್ರಸ್ಟಿ ಹಾಗೂ ನ್ಯಾಷನಲ್ ಮೆಡಿಕೋಸ್ ಸಂಸ್ಥೆಯ ಕೊಡಗು ಘಟಕದ ಅಧ್ಯಕ್ಷ ಡಾ.ಮೋಹನ್ ಅಪ್ಪಾಜಿ, ಬಳಗದ ಟ್ರಸ್ಟಿಗಳಾದ ಕೆ.ಎಂ.ಗಣೇಶ್, ಕೊಟ್ಟುಕತ್ತೀರ ಯಶೋಧ ಪ್ರಕಾಶ್ ಹಾಗೂ ಖಜಾಂಚಿ ಕೂಡಂಡ ಸೀಮಾ ಕಾವೇರಪ್ಪ ಸುದ್ದಿಗೋಷ್ಠಿಯಲ್ಲಿ ಇದ್ದರು.