ಹೂಟಗಳ್ಳಿ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣೆ

Health Checkup for Hootagalli Civic Workers
Published on

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷೃ ತೋರದೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

ನಗರದ ಹೂಟಗಳ್ಳಿ ನಗರ ಸಭೆ ಆವರಣದಲ್ಲಿ ಸಮೃದ್ಧಿ ಟ್ರಸ್ಟ್, ಅನ್ನಪೂರ್ಣ ಕಣ್ಣಿನ ಆಸ್ಪತ್ರೆ, ಎನ್‌ಪಿ ಆಸ್ಪತ್ರೆ ಹಾಗೂ ಬಯೋ ಸ್ನೇಹಿ ಸಂಸ್ಥೆ ಸಹಯೋಗದೊಂದಿಗೆ ಪೌರ ಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿಡುತ್ತಿರುವ ಕಾರಣದಿಂದ ಇಂದು ನಮ್ಮೆಲ್ಲರ ಆರೋಗ್ಯ ಉತ್ತಮವಾಗಿದೆ. ಪೌರ ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಕೆಲಸದ ಒತ್ತಡದಲ್ಲಿ ಮಾಡುವ ಕೆಲವೊಂದು ನಿರ್ಲಕ್ಷೃತನದಿಂದ ನಮ್ಮ ಆರೋಗ್ಯ ಹಾಳಾಗುತ್ತಿದೆ. ಪೌರಕಾರ್ಮಿಕರು ಆರೋಗ್ಯ ತಪಾಸಣೆ ಶಿಬಿರಗಳಿಗೆ ಸೀಮಿತವಾಗದೆ ನಿತ್ಯ ಆರೋಗ್ಯದ ಕಡೆಗೆ ಗಮನ ಹರಿಸಬೇಕು ಹೇಳಿದರು.

ಪೌರಕಾರ್ಮಿಕರು ಆರೋಗ್ಯವಾಗಿದ್ದರೆ ಇಡೀ ನಗರ ಆರೋಗ್ಯವಾಗಿರುತ್ತದೆ. ಪೌರಕಾರ್ಮಿಕರು ಆರೋಗ್ಯವಂತರಾಗಿದ್ದರೆ ನಗರದ ಸ್ವಚ್ಛತೆಯನ್ನು ಕಾಪಾಡಿ ಎಲ್ಲರ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ. ಆದ್ದರಿಂದ ಅವರು ಇಂತಹ ಆರೋಗ್ಯ ಶಿಬಿರಗಳನ್ನು ಸದುಪಯೋಗ ಪಡೆದು ಕೊಳ್ಳಬೇಕು ಎಂದರು

ನಗರಸಭೆ ಆಯುಕ್ತ ಚಂದ್ರಶೇಖರ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಿರಿಜಾ, ಪತ್ರಕರ್ತೆ ಸಹನಗೌಡ, ಒಂದು ಹೆಜ್ಜೆ ರಕ್ತದಾನಿಗಳ ಬಳಗದ ಅಧ್ಯಕ್ಷ ರಕ್ತದಾನಿ ಮಂಜು, ಅನ್ನಪೂರ್ಣ ಕಣ್ಣಿನ ಆಸ್ಪತ್ರೆ ವೈದ್ಯ ಎಂ.ಡಿ.ಅಶ್ವತ್ ಕುಮಾರ್, ಆರೋಗ್ಯ ನಿರೀಕ್ಷಕರಾದ ಶಂಕರಲಿಂಗೇಗೌಡ, ಶಿವಪ್ರಸಾದ್, ನೇತ್ರಾವತಿ, ಪುಷ್ಪಲತಾ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net