ಆರೋಗ್ಯ ತಪಾಸಣೆ ಉಚಿತ ಶಿಬಿರ ನಾಳೆ

Free health checkup camp at Thoravi on 27th
Published on

ಚಿಕ್ಕೋಡಿ: ಇಲ್ಲಿನ ಕೆಎಲ್‌ಇ ಆಯುರ್ವೇದ ಆಸ್ಪತ್ರೆಯ ವತಿಯಿಂದ ಮಹಿಳೆರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಮಾ.4ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗೆ ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ಪಿಸಿಒಡಿ, ಅನಿಯಮಿತ ಮುಟ್ಟಿನ ತೊಂದರೆ, ಬಂಜೆತನ, ಗರ್ಭಾಶಯದ ಗಂಟು, ಸ್ತನದ ಗಂಟು, ಮೊಡವೆ, ಹಾರ್ಮೋನ್ ವ್ಯತ್ಯಾಸ, ಚರ್ಮ ಕಪ್ಪಾಗುವಿಕೆ, ಕೂದಲು ಉದುರುವಿಕೆ, ಅಂಡಾಶಯದ ಗಂಟು, ಬೊಜ್ಜಿನ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳ ತಪಾಸಣೆ ಹಾಗೂ ವಿಶೇಷ ಆಯುರ್ವೇದ ಚಿಕಿತ್ಸೆಗಳ ಮೇಲೆ ರಿಯಾಯಿತಿ ನೀಡಲಾಗುವುದು.

ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ವೈದ್ಯಕೀಯ ನಿರ್ದೇಶಕ ಡಾ.ಕಿರಣ ಮುತ್ನಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗಾಗಿ ಮೊ. 08338275100 ಸಂಪರ್ಕಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net