ಚರ್ಮಗಂಟು ರೋಗದಿಂದ ರೈತರಿಗೆ ಆತಂಕ: ಕೃಷಿಕ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ.ಹನುಮಂತು ಹೇಳಿಕೆ

1 (4)
Published on

ಮಂಡ್ಯ: ಇತ್ತೀಚೆಗೆ ಹೈನುಗಾರಿಕೆಯ ರಾಸುಗಳಿಗೆ ಹರಡುತ್ತಿರುವ ಚರ್ಮಗಂಟು ರೋಗದಿಂದ ರೈತರಲ್ಲಿ ಆತಂಕ ಶುರುವಾಗಿದೆ ಎಂದು ಕೃಷಿಕ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ.ಹನುಮಂತು ಹೇಳಿದರು.

ತಾಲೂಕಿನ ಬಿ.ಹೊಸೂರು ಕಾಲನಿಯಲ್ಲಿ ಕೃಷಿಕ ಲಯನ್ಸ್ ಸಂಸ್ಥೆ, ಪಶುಪಾಲನಾ ಇಲಾಖೆ ಹಾಗೂ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್.ಎಸ್ ಘಟಕದ ಸಹಯೋಗದೊಡನೆ ಆಯೋಜಿಸಿದ್ದ ರಾಸುಗಳ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಚರ್ಮಗಂಟು ರೋಗದಿಂದ ಹಾಲಿನ ಉತ್ಪಾದನೆಯು ಕಡಿಮೆಯಾಗಿದೆ. ಜಾನುವಾರುಗಳಿಗೆ ಚಿಕಿತ್ಸೆ ನೀಡಬೇಕಾದ ಪಶು ವೈದ್ಯರು ಹಾಗೂ ಸಿಬ್ಬಂದಿ ಕೊರತೆಯೂ ಎದುರಾಗಿದೆ. ಸರ್ಕಾರ ತಕ್ಷಣ ಪಶು ಇಲಾಖೆಗೆ ಅಗತ್ಯ ಸಿಬ್ಬಂದಿ ನೇಮಕ ಹಾಗೂ ಸಲಕರಣೆಗಳನ್ನು ನೀಡಬೇಕೆಂದು ಆಗ್ರಹಿಸಿದರು.

ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ರಮೇಶ್ ರಾಜು ಮಾತನಾಡಿ, ಚರ್ಮಗಂಟು ರೋಗ ಹಾಗೂ ಜಾನುವಾರುಗಳಿಗೆ ಇನ್ನಿತರೆ ಯಾವುದೇ ಆರೋಗ್ಯ ಸಮಸ್ಯೆ ಕಂಡು ಬಂದಲ್ಲಿ ಪಶು ವೈದ್ಯರನ್ನು ಕಂಡು ಸೂಕ್ತ ಚಿಕಿತ್ಸೆಯನ್ನು ಕೊಡಿಸಬೇಕೆಂದು ಸಲಹೆ ನೀಡಿದರು.

ಪಶುವೈದ್ಯಾಧಿಕಾರಿಗಳಾದ ಡಾ.ಯೋಗೇಶ್‌ಗೌಡ, ಡಾ.ಮಿಥುನ್, ಶಿಬಿರದ ಅಧಿಕಾರಿ ಗೀತಾಮಣಿ, ರಮ್ಯಾ ಇತರರಿದ್ದರು. ಇದೇ ಸಂದರ್ಭದಲ್ಲಿ ರೈತರ ಸಾಕುಪ್ರಾಣಿಗಳಿಗೆ ಆರೋಗ್ಯ ತಪಾಸಣೆ ನಡಸಿ ಚಿಕಿತ್ಸೆ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net