ನರೇಗಾ ಕಾರ್ಮಿಕರ ಆರೋಗ್ಯ ತಪಾಸಣೆ

ನರೇಗಾ ಕಾರ್ಮಿಕರ ಆರೋಗ್ಯ ತಪಾಸಣೆ
Published on

ಹನೂರು: ತಾಲೂಕಿನ ದೊಡ್ಡಲತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಸೋಮವಾರ ನರೇಗಾ ಯೋಜನೆಯ ಕೂಲಿ ಕಾರ್ಮಿಕರಿಗೆ ಗ್ರಾ.ಪಂ ವತಿಯಿಂದ ಆರೋಗ್ಯ ತಪಾಸಣೆ ನಡೆಯಿತು.

ಗ್ರಾಮದಲ್ಲಿ ಕಾಲುವೆ ಹೂಳೆತ್ತುವ ಕಾಮಗಾರಿಯಲ್ಲಿ ತೊಡಗಿದ್ದ ಸುಮಾರು 150ಕ್ಕೂ ಹೆಚ್ಚು ಜನರಿಗೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಸಲಹೆ ನೀಡಲಾಯಿತು.

ಈ ವೇಳೆ ಪಿಡಿಒ ಸೆಲ್ವರಾಜ್ ಮಾತನಾಡಿ, ನರೇಗಾ ಯೋಜನೆಯ ಕಾಮಗಾರಿಯಲ್ಲಿ ತೊಡಗುವ ಕೂಲಿ ಕಾರ್ಮಿಕರ ಆರೋಗ್ಯದ ದೃಷ್ಠಿಯಿಂದ ಗ್ರಾ.ಪಂ.ವತಿಯಿಂದ ಆರೋಗ್ಯ ಅಮೃತ ಅಭಿಯಾನ ಯೋಜನೆಯಡಿ ಆರೋಗ್ಯ ಉಚಿತ ತಪಾಸಣೆ ನಡೆಸಲಾಗುತ್ತಿದೆ. ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳುವುದರ ಮೂಲಕ ಆರೋಗ್ಯದ ಕಡೆ ಹೆಚ್ಚು ಗಮನಹರಿಸಬೇಕು. ಇದರಿಂದ ಅಭಿವೃದ್ಧಿ ಕಾಮಗಾರಿಗಳಲ್ಲಿ ಹೆಚ್ಚು ಭಾಗವಹಿಸಲು ಸಾಧ್ಯವಾಗುತ್ತದೆ. ಗ್ರಾಮದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಶ್ರುಶೂಷಕಿ ಚೈತ್ರ, ಬಿಲ್ ಕಲೆಕ್ಟರ್ ಕುಮಾರ್, ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net