ಆರೋಗ್ಯ ಇಲಾಖೆಗೆ 600 ಶುಶ್ರೂಷಾಧಿಕಾರಿಗಳ ಹುದ್ದೆ ಭರ್ತಿಗೆ ಸರ್ಕಾರ ಅನುಮತಿ

Arogya soudha
Published on

ಬೆಂಗಳೂರು: ಆರೋಗ್ಯ ಇಲಾಖೆಯಡಿ ಮಂಜೂರಾಗಿ ಖಾಲಿ ಇರುವ 600 ಶುಶ್ರೂಷಾಧಿಕಾರಿಗಳ ಹುದ್ದೆ ಭರ್ತಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಇಲಾಖೆಯಲ್ಲಿ ನೇರ ನೇಮಕಾತಿ ಮೂಲಕ ಶುಶ್ರೂಷಾಧಿಕಾರಿಗಳ ಹುದ್ದೆ ಭರ್ತಿಯಾದ ಬಳಿಕ, 600 ಶುಶ್ರೂಷಾಧಿಕಾರಿಗಳ ಗುತ್ತಿಗೆ ಸೇವೆಯನ್ನು ರದ್ದುಗೊಳಿಸಬೇಕು. ಈ ನೇಮಕಾತಿಯಿಂದ ಭವಿಷ್ಯದ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಯಾವುದೆ ಕಾನೂನು ತೊಡಕುಗಳು ಆಗದಂತೆ ಕ್ರಮ ವಹಿಸಬೇಕೆಂದು ಸೂಚಿಸಲಾಗಿದೆ.

ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ಆಯ್ಕೆಯನ್ನು ಈ ಹಿಂದಿನ ಗುತ್ತಿಗೆ ಅವಧಿಯ ಸೇವೆಯನ್ನು ಪರಿಗಣಿಸದೆ, ಮತ್ತೆ ಹೊಸದಾಗಿ ಸೇವೆಗೆ ಸೇರಿಕೊಂಡಂತೆ ಪರಿಗಣಿಸಿ ಆಯ್ಕೆ ಮಾಡಬೇಕು. ಇಲಾಖೆ ಆಯುಕ್ತರು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳುವ ಮೊದಲು, ಸಿಬ್ಬಂದಿ ಕೊರತೆ ಇರುವ ಆರೋಗ್ಯ ಕೇಂದ್ರಗಳ ವಿವರವನ್ನು ಸರ್ಕಾರಕ್ಕೆ ಜಿಲ್ಲಾವಾರು ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net