ಡಿ ಗ್ರೂಪ್ ನೌಕರರಿಗೆ ವೇತನ ನೀಡದ ಆರೋಗ್ಯ ಇಲಾಖೆ

16-JUNE-GPT-3
ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಎದುರು ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದಿಲೀಪ್, ಶಿವಣ್ಣ, ್ಷ ಮಹದೇವಪ್ಪ, ಲೋಕೇಶ್ ಇದ್ದರು.
Published on

ಗುಂಡ್ಲುಪೇಟೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಡಿ ಗ್ರೂಪ್ ನೌಕರರಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ವೇತನ ನೀಡಿಲ್ಲ ಎಂದು ಆರೋಪಿಸಿ ರೈತ ಸಂಘದ ಕಾರ್ಯಕರ್ತರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ದಿಲೀಪ್ ನೇತೃತ್ವದಲ್ಲಿ ಸೋಮವಾರ ಆಸ್ಪತ್ರೆ ಎದುರು ಸಮಾವೇಶಗೊಂಡ ಕಾರ್ಯಕರ್ತರು, ಆಡಳಿತಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿ 34 ಡಿಗ್ರೂಪ್ ನೌಕರರಿದ್ದು, ಆಸ್ಪತ್ರೆಯ ಹೆಚ್ಚಿನ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಆದರೆ ಇವರಿಗೆ 5 ತಿಂಗಳಿನಿಂದ ವೇತನ ನೀಡಿಲ್ಲ. ಇವರನ್ನು ಅವಲಂಬಿಸಿದ ಕುಟುಂಬದವರು ತೊಂದರೆ ಎದುರಿಸುವಂತಾಗಿದೆ. ಈ ಬಗ್ಗೆ ಹಲವಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ನಿರ್ಲಕ್ಷಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ, ಕೂಡಲೇ ವೇತನ ಪಾವತಿಗೆ ಒತ್ತಾಯಿಸಿದರು.

ಆಸ್ಪತ್ರೆ ಆಡಳಿತಾಧಿಕಾರಿ ಡಾ.ಮಂಜುನಾಥ್ ಪ್ರತಿಭಟನಾಕಾರರನ್ನು ಭೇಟಿ ಮಾಡಿ ಚರ್ಚಿಸಿದರಲ್ಲದೆ, ಕೆಲವು ತಾಂತ್ರಿಕ ಕಾರಣಗಳಿಂದ ವೇತನ ವಿಳಂಬವಾಗಿದ್ದು, ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗಿದೆ. ಸದ್ಯದಲ್ಲಿಯೇ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಉಪಾಧ್ಯಕ್ಷ ಮಹದೇವಪ್ಪ, ಜಿಲ್ಲಾಧ್ಯಕ್ಷ ಮಹದೇವಪ್ಪ, ಲೋಕೇಶ್ ಸೇರಿದಂತೆ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net