ಆರೋಗ್ಯ ಇಲಾಖೆ ಸಿಬ್ಬಂದಿ ಗೈರು

01-03-ಗೊರೇಬಾಳ-01
Published on

ಗೊರೇಬಾಳ: ಹೋಬಳಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿ ಸೇರಿ ವಿವಿಧ ಸರ್ಕಾರಿ ಕಚೇರಿಗಳು ಹಾಗೂ ಶಾಲೆಗಳು ಬುಧವಾರ ಮುಚ್ಚಿದ್ದವು. ಶಿಕ್ಷಕರು ಗೈರಾಗಿದ್ದರಿಂದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಬೀಗ ಹಾಕಲಾಗಿತ್ತು. ಗ್ರಾಮದ ನಾಡ ಕಚೇರಿಗೆ ಜನರು ಆಗಮಿಸಿ ಸಿಬ್ಬಂದಿಯಿಲ್ಲದ್ದರಿಂದ ಹಿಂದುರಿಗಿದರು. ಆರೋಗ್ಯ ಇಲಾಖೆ ಸಿಬ್ಬಂದಿ ಗೈರಾಗಿದ್ದರು. ಶಾಂತಿನಗರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕಂಡುಬರಲಿಲ್ಲ. ರೋಗಿಗಳು ಖಾಸಗಿ ಆಸ್ಪತ್ರೆಗಳಿಗೆ ತೆರಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net