ಭೀಮನಬೀಡು ಗ್ರಾಮದಲ್ಲಿ ಆರೋಗ್ಯ ಶಿಕ್ಷಣ ಕಾರ್ಯಕ್ರಮ

31-AUG-GPT-2
ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದಲ್ಲಿ ಆರೋಗ್ಯಾಧಿಕಾರಿ ಕಚೇರಿಯಿಂದ ಮನೆಗಳಿಗೆ ತೆರಳಿ ಆರೋಗ್ಯ ಶಿಕ್ಷಣ ನೀಡಲಾಯಿತು. ಡಾ.ಅಲೀಂ ಪಾಷಾ, ಅಶ್ವಿನಿ, ವಿನಾಯಕ, ಸುಮಲತಾ, ದೀಪಾ ಇದ್ದರು.
Published on

ಗುಂಡ್ಲುಪೇಟೆ: ತಾಲೂಕಿನ ಭೀಮನಬೀಡು ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಿಂದ ಮನೆಗಳಿಗೆ ತೆರಳಿ ಆರೋಗ್ಯ ಶಿಕ್ಷಣ ನೀಡಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ. ಅಲೀಮ್ ಪಾಷಾ ಅವರು ಮನೆ ಮನೆಗಳಿಗೆ ಭೇಟಿ ನೀಡಿ ಗರ್ಭಿಣಿಯರು ಮತ್ತು ಬಾಣಂತಿಯರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಆರೋಗ್ಯ ಶಿಕ್ಷಣವನ್ನು ನೀಡಿದರು. ಕಾರ್ಯಕ್ರಮದ ವಿವರಗಳನ್ನು ಅಲ್ಲಿನ ಸಮುದಾಯ ಆರೋಗ್ಯ ಅಧಿಕಾರಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಮೇಲ್ವಿಚಾರಣೆ ನಡೆಸಿದರು.

ಸಮುದಾಯ ಆರೋಗ್ಯಾಧಿಕಾರಿಗಳಾದ ಅಶ್ವಿನಿ, ವಿನಾಯಕ, ಆಶಾ ಕಾರ್ಯಕರ್ತೆಯರಾದ ಸುಮಲತಾ ಮತ್ತು ದೀಪಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net