ಶರವು ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಭೇಟಿ

SHARAU
ಶರವು ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವರಾದ ಡಾ. ಭಾರತಿ ಪ್ರವೀಣ್ ಪವಾರ್ ಅವರು ಸೋಮವಾರ ಭೇಟಿ ನೀಡಿ ದೇವರ ದರ್ಶನ ಪಡೆದವರು.
Published on

ಮಂಗಳೂರು: ಶರವು ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಯ ರಾಜ್ಯ ಸಚಿವರಾದ ಡಾ. ಭಾರತಿ ಪ್ರವೀಣ್ ಪವಾರ್ ಅವರು ಸೋಮವಾರ ಭೇಟಿ ನೀಡಿ ದೇವರ ದರ್ಶನ ಪಡೆದವರು. ಶರವು ದೇವಸ್ಥಾನದ ಶಿಲೆ ಶಿಲೆ ಆಡಳಿತ ಮೊಕ್ತೇಸರರಾದ ಶರವು ರಾಘವೇಂದ್ರ ಶಾಸಿ ಬರಮಾಡಿಕೊಂಡು ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಶುಭ ಹಾರೈಸಿದರು. ಶರವು ದೇವಸ್ಥಾನದ ಹಿನ್ನಲೆ, ವೈಶಿಷ್ಟ್ಯತೆಯನ್ನು ಸಚಿವರಿಗೆ ಮನವರಿಕೆ ಮಾಡಿದರು. ಶರವು ಅರ್ಚಕರಾದ ಗಣೇಶ್ ಭಟ್, ಬಿಜೆಪಿ ಮುಖಂಡರಾದ ಪೂಜಾ ಪೈ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net