ಎಸ್‌ಡಿಎಂ ಪಾಲಿಟೆಕ್ನಿಕ್‌ನಲ್ಲಿ ಆರೋಗ್ಯ ಮಾಹಿತಿ

Bel_Health information
ಆರೋಗ್ಯದ ಮಾಹಿತಿ ಕಾರ್ಯಕ್ರಮದಲ್ಲಿ ಆನ್ಸ್ ಕ್ಲಬ್‌ನ ಅಧ್ಯಕ್ಷೆ ಗಾಯತ್ರಿ ಶ್ರೀಧರ್ ಮಾತನಾಡಿದರು. ಸಂತೋಷ, ಡಾ.ವಿನಯ ಕಿಶೋರ್ ಮೊದಲಾದವರಿದ್ದರು.
Published on

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್‌ಎಸ್‌ಎಸ್ ಮತ್ತು ಯುವ ರೆಡ್‌ಕ್ರಾಸ್ ಘಟಕದ ಅಂಗವಾಗಿ ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ಆನ್ಸ್ ಕ್ಲಬ್‌ನ ಸಹಭಾಗಿತ್ವದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಸಂತೋಷ ಅಧ್ಯಕ್ಷತೆ ವಹಿಸಿದ್ದರು. ಸ್ತ್ರೀರೋಗ ತಜ್ಞೆ ಡಾ.ವಿನಯ ಕಿಶೋರ್ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಹದಿಹರೆಯದ ಸಮಸ್ಯೆ, ಆರೋಗ್ಯ ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು.

ಆನ್ಸ್ ಕ್ಲಬ್‌ನ ಅಧ್ಯಕ್ಷೆ ಗಾಯತ್ರಿ ಶ್ರೀಧರ್ ಹಾಗೂ ಎನ್‌ಎಸ್‌ಎಸ್ ಯೋಜನಾಧಿಕಾರಿ ಪ್ರಕಾಶ್, ಯುವ ರೆಡ್‌ಕ್ರಾಸ್ ಘಟಕದ ಯೋಜನಾಧಿಕಾರಿ ಅವನೀಶ್ ಪಿ, ಪಾಲಿಟೆಕ್ನಿಕ್ ಕಾಲೇಜಿನ ಮಹಿಳಾ ಸಿಬ್ಬಂದಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net